×
Ad

ಕಲಬುರಗಿ | ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Update: 2025-06-10 19:13 IST

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ 38 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ 99 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ 7 ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 28 ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು (ಪ್ರಾಂಶುಪಾಲರ ಹಂತದಲ್ಲಿ) ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಮೇ 25ರ ರಾಜ್ಯ ಸರ್ಕಾರದ ಆದೇಶದನ್ವಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದ್ದು, ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ 2025ರ ಜೂ.16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರು ಆಯ್ಕೆ ಮಾಡಿದ ಉಪನ್ಯಾಸಕರ ವಿಷಯವಾರು ಪಟ್ಟಿಯನ್ನು ಸಲ್ಲಿಸಲು ಜೂ.17 ಕೊನೆಯ ದಿನವಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ/ ಇಲಾಖೆಯ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಜಿಲ್ಲೆಯ ಕಾಲೇಜುವಾರು ಖಾಲಿಯಿರುವ ವಿಷಯವಾರು ಶಿಕ್ಷಕರ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿವಿಧಾನ ಸೌಧ ಆವರಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News