×
Ad

ಕಲಬುರಗಿ | ಸೆಲ್‍ಫೋನ್ ದುರಸ್ತಿ, ಸೇವೆ ಕುರಿತು ತರಬೇತಿ ಪಡೆಯಲು ಅರ್ಜಿ ಆಹ್ವಾನ

Update: 2025-05-16 19:56 IST

ಕಲಬುರಗಿ : ಕಲಬುರಗಿ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಉಚಿತವಾಗಿ ಕೆಳಕಂಡ ದಿನಾಂಕಗಳಂದು ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಎಸ್.ಬಿ.ಐ. ಆರ್‍ಸೆಟ್ ನಿರ್ದೇಶಕರು ತಿಳಿಸಿದ್ದಾರೆ.

ಜೂ.19 ರಿಂದ ಜು.18 ರವರೆಗೆ 30 ದಿನಗಳ ಕಾಲ ಸೆಲ್‍ಫೋನ್ ದುರಸ್ತಿ ಮತ್ತು ಸೇವೆ ತರಬೇತಿ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಜೂ.18 ಕೊನೆಯ ದಿನವಾಗಿದೆ. ಜೂ.5 ರಿಂದ ರಿಂದ ಜು.4 ರವರೆಗೆ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ನೀಡಲಾಗುತ್ತಿದ್ದು, ಅರ್ಜಿ ಸಲ್ಲಿಕೆಗೆ ಜೂ.4 ಕೊನೆಯ ದಿನವಾಗಿದೆ. ಈ ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ವಯೋಮಿತಿ 18 ರಿಂದ 45 ವರ್ಷದೊಳಗಿನ ಬಿ.ಪಿ.ಎಲ್., ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್ ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ ಮೇಲ್ಕಂಡ ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬೇಕು.

ಮತ್ತಿತರ ಹೆಚ್ಚಿನ ಮಾಹಿತಿಗಾಗಿ ತರಬೇತಿ ಸಂಸ್ಥೆಯನ್ನು ಹಾಗೂ ಮೊಬೈಲ್ ಸಂಖ್ಯೆ 9448994585, 9886781239 ಹಾಗೂ 9900135705ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News