×
Ad

ಕಲಬುರಗಿ | ಬೀದಿ ನಾಟಕಕ್ಕೆ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನ

Update: 2025-11-06 21:03 IST

ಕಲಬುರಗಿ : ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮ/ ಯೋಜನೆಗಳ ಕುರಿತು ತೀವ್ರ ಪ್ರಚಾರಾಂದೋಲನದ ಮೂಲಕ ಜಾಗೃತಿ ಮೂಡಿಸಲು ಕಲಬುರಗಿ ಜಿಲ್ಲೆಯ ನೋಂದಾಯಿತ ಬೀದಿ ನಾಟಕ ಕಲಾ ತಂಡಗಳು, ಸಾಂಗ್ ಮತ್ತು ಡ್ರಾಮಾ ಡಿವಿಜನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಾರ್ತಾ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೋಂದಣೆಯಾಗಿರುವ ಬೀದಿ ನಾಟಕ ಜಾನಪದ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಜಿ ಸಲ್ಲಿಸಲು ಕಳೆದ 3 ವರ್ಷದ ಅಡಿಟ್ ವರದಿ, ಬೀದಿನಾಟಕ ಜಾನಪದ ಕಲಾ ತಂಡಗಳು ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು/ಸರ್ಕಾರಿ ಇಲಾಖೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿದ ಕುರಿತು ಅನುಭವ ಹೊಂದಿರಬೇಕು. ಕಲಾತಂಡದಲ್ಲಿ ಕನಿಷ್ಠ 8 ಜನ ಕಲಾವಿದರಿರಬೇಕು. ಇದರಲ್ಲಿ ಇಬ್ಬರು ಮಹಿಳಾ ಕಲಾವಿದರಿರಬೇಕು. ಕಲಾ ತಂಡದವರು ಕಲಬುರಗಿ ಜಿಲ್ಲೆಯವರಾಗಿರಬೇಕು.

ಆಸಕ್ತಿಯುಳ್ಳ ಅರ್ಹ ಬೀದಿನಾಟಕ, ಜಾನಪದ ಕಲಾ ತಂಡಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿನ ಐಇಸಿ ವಿಭಾಗದಿಂದ ಕಚೇರಿ ಸಮಯದಲ್ಲಿ ಪಡೆದು ಭರ್ತಿ ಮಾಡಿ 2025ರ ನ.7 ರಿಂದ 15 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಕಲಾ ತಂಡಗಳಿಗೆ ಆಯ್ಕೆ ಪ್ರಕ್ರಿಯೆ ಏರ್ಪಡಿಸಲಾಗುತ್ತದೆ. ಆಯ್ಕೆ ಪ್ರಕ್ರಿಯೆ ದಿನಾಂಕ ನಂತರ ತಿಳಿಸಲಾಗುತ್ತದೆ. ಅರ್ಜಿ ಸಲ್ಲಿಸಿದ ಕಲಾತಂಡಗಳು ತಮ್ಮ ಸ್ವಂತ ಖರ್ಚಿನಲ್ಲಿ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಮ್ಮ ಪ್ರತಿಭೆ ಪ್ರದರ್ಶಿಸಬೇಕು. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಕಲಾ ತಂಡಗಳಿಗೆ ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News