Kalaburagi | ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳ ಭರ್ತಿಗಾಗಿ ಅರ್ಜಿ ಆಹ್ವಾನ
ಕಲಬುರಗಿ : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಕಾರ್ಯನಿರ್ವಹಿಸುತ್ತಿರುವ ಕಲಬುರಗಿ ಜಿಲ್ಲೆಯಲ್ಲಿನ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಸತಿ ನಿಲಯಗಳಲ್ಲಿ (ಸಾಮಾನ್ಯ ಪದವಿ ಮಟ್ಟದ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಆಸಕ್ತಿಯುಳ್ಳ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಆಸಕ್ತಿಯುಳ್ಳ ವಿದ್ಯಾರ್ಥಿಗಳು https://shp.karnataka.gov.in ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2026ರ ಜುಲೈ 30 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮತ್ತು ಅಫಜಲಪೂರ ತಾಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳ ಮೊಬೈಲ್ ಸಂಖ್ಯೆ–9742305668, ಜೇವರ್ಗಿ-9845036156, ಆಳಂದ- 9742305668, ಸೇಡಂ-9886786180, ಚಿತ್ತಾಪೂರ-9972554852, ಚಿಂಚೋಳಿ-8971524009 ಹಾಗೂ ಕಲಬುರಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಚೇರಿಯ ದೂರವಾಣಿ ಸಂಖ್ಯೆ 08472-247260 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.