Kalaburagi | ಗುಲ್ಬರ್ಗಾ ವಿವಿಯಲ್ಲಿ ಸಂಶೋಧನಾ, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟಕ್ಕೆ ಪದಾಧಿಕಾರಿಗಳ ನೇಮಕ
ಕಲಬುರಗಿ: ನಗರದ ಗುಲ್ಬರ್ಗಾ ವಿಶ್ವವಿದ್ಯಾಲಯದ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ವಿಶ್ವವಿದ್ಯಾಲಯದ ಜ್ಞಾನಗಂಗಾ ಆವರಣದಲ್ಲಿರುವ ನೃಪತುಂಗ ಸಂಶೋಧನಾ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಸಭೆಗೆ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಡಾ. ಗೌತಮ್ ಕರಿಕಲ್ ನೇತೃತ್ವ ವಹಿಸಿದ್ದರು.
ಸಭೆಯಲ್ಲಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ರವಿ ಅವರನ್ನು ಆಯ್ಕೆ ಮಾಡಲಾಗಿದ್ದು, ಸ್ನಾತಕೋತ್ತರ ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷರಾಗಿ ಸಚಿನ್ ಹಾಗೂ ಉಪಾಧ್ಯಕ್ಷರಾಗಿ ಅಭಿಷೇಕ ಗಾಯಕವಾಡ ಅವರನ್ನು ಅವಿರೋಧವಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟದ ಮಾಜಿ ಅಧ್ಯಕ್ಷ ಆನಂದ ಮೈತ್ರಿ, ಹನುಮಂತ ಸೇರಿದಂತೆ ಸಂಶೋಧನಾ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ನೂತನ ಪದಾಧಿಕಾರಿಗಳಿಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು.