Kalaburagi | 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ ಲೋಕಾಯುಕ್ತ ಬಲೆಗೆ

Update: 2026-07-17 16:25 IST

ಕಲಬುರಗಿ: 10 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಕಲಬುರಗಿಯ 5ನೇ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕ (ಎಪಿಪಿ) ಸಂತೋಷ್ ಕುಮಾರ್ ಲೋಖಂಡೆ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದಾರೆ.

ರಾಹುಲ್ ಹೈದರಾಬಾದ್ ಅವರ ನ್ಯಾಯಾಲಯದ ಪ್ರಕರಣದಲ್ಲಿ ರಾಜಿ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಬಾಕಿ ಕೆಲಸ ಪೂರ್ಣಗೊಳಿಸುವುದಾಗಿ ಹೇಳಿ ಆರೋಪಿ 10 ಸಾವಿರ ರೂ. ನಗದು ಜೊತೆಗೆ 9 ಸೀರೆಗಳು, 4 ಶರ್ಟ್‌ಗಳು, 4 ಜೀನ್ಸ್ ಪ್ಯಾಂಟ್‌ಗಳು, ಒಂದು ಜೋಡಿ ಶೂ, 4 ಮಹಿಳೆಯರ ಉಡುಪುಗಳು ಹಾಗೂ 6 ಜೋಡಿ ಮಹಿಳೆಯರ ಚಪ್ಪಲಿಗಳನ್ನು ಅಕ್ರಮವಾಗಿ ಬೇಡಿಕೆ ಇಟ್ಟಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ದೂರಿನ ಮೇರೆಗೆ ಲೋಕಾಯುಕ್ತ ಪೊಲೀಸ್ ಇನ್‌ಸ್ಪೆಕ್ಟರ್ ಅರುಣ್ ಕುಮಾರ್ ನೇತೃತ್ವದ ತಂಡ ನ್ಯಾಯಾಲಯ ಸಂಕೀರ್ಣದ ಸಮೀಪ ಕಾರ್ಯಾಚರಣೆ ನಡೆಸಿ, ಆರೋಪಿ 10 ಸಾವಿರ ರೂ. ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಬಂಧಿಸಿದೆ.

ಆರೋಪಿಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News