×
Ad

ಕಲಬುರಗಿ | ಮಾರಕಾಸ್ತ್ರಗಳಿಂದ ವ್ಯಕ್ತಿಯ ಮೇಲೆ ಹಲ್ಲೆ: 9 ಮಂದಿಯ ವಿರುದ್ಧ ಪ್ರಕರಣ ದಾಖಲು

Update: 2025-04-24 21:26 IST

ಕಲಬುರಗಿ: ವ್ಯಕ್ತಿಯೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಗರದ ಎಂ.ಎಸ್.ಮಿಲ್ ಪ್ರದೇಶದಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಇಕ್ಬಾಲ್ ಕಾಲೋನಿಯ ನಿವಾಸಿ ಮಹಮ್ಮದ್ ಜಮೀಲ್ (38) ಎಂದು ಗುರುತಿಸಲಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಿಝ್ವಾನ್ ಎಂಬಾತ ಕರೆ ಮಾಡಿ ನಿನ್ನ ಜೊತೆ ಮಾತನಾಡೋದು ಇದೆ, ನೀನು ಬೇಗನೆ ಮದೀನಾ ಕಾಲೋನಿಯ ಪಾನ್ ಶಾಪ್ ಬಳಿ ಬಾ ಎಂದು ಕರೆದು ಆತನ ಗೆಳೆಯರೊಂದಿಗೆ ಸೇರಿ ನನ್ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೆ ಒಳಗಾದ ವ್ಯಕ್ತಿ ದೂರಿನಲ್ಲಿ ತಿಳಿಸಿದ್ದಾರೆ.

ವ್ಯಕ್ತಿ ನೀಡಿದ ದೂರಿನನ್ವಯ ನಗರದ ಆರ್.ಜೆ ನಗರ ಪೊಲೀಸ್ ಠಾಣೆಯಲ್ಲಿ 9 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ.

ರಿಝ್ವಾನ್, ಖಾಜಾ ಮೈನೋದ್ದೀನ್, ಬಾಬಾ, ರಿಯಾನ್, ಮೌಲಾಲಿ, ಖಾಜಾ ಪಾಷಾ ಮತ್ತು ಇರ್ಫಾನ್ ಸೇರಿದಂತೆ ಇನ್ನಿಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News