×
Ad

ಕಲಬುರಗಿ| ಪತ್ರಕರ್ತನ ಮೇಲೆ ಹಲ್ಲೆ: ಕಿಡಿಗೇಡಿಗಳ ವಿರುದ್ಧ ಕ್ರಮಕ್ಕೆ ಪತ್ರಕರ್ತರ ಸಂಘ ಆಗ್ರಹ

Update: 2025-12-04 22:06 IST

ಕಲಬುರಗಿ: ಯಡ್ರಾಮಿ ತಾಲೂಕಿನ ಪತ್ರಕರ್ತ ಪ್ರಶಾಂತ್‌ ಚವ್ಹಾಣ ಮೇಲೆ ಹಲ್ಲೆ ಮಾಡಿದ್ದು ಖಂಡನಿಯ, ಹಲ್ಲೆ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆಗ್ರಹಿಸಿದೆ. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿದರು.

ಯಡ್ರಾಮಿ ವರದಿಗಾರ ಪ್ರಶಾಂತ್‌ ಚವ್ಹಾಣ್‌ ಅವರ ಮೇಲೆ ಹಲ್ಲೆ ಮಾಡಿದ ಕೀಡಿಗೇಡಿಗಳನ್ನು 24 ಗಂಟೆ ಒಳಗಾಗಿ ಬಂಧಿಸಿ ಶಿಕ್ಷೆ ನೀಡದೆ ಹೊದರೆ, ಜಿಲ್ಲೆ ಹಾಗೂ ರಾಜ್ಯಮಟ್ಟದಲ್ಲಿ ಉಗ್ರವಾದ ಹೋರಾಟ ಮಾಡಲಾಗುತ್ತದೆ. ಜೇವರ್ಗಿ ಹಾಗೂ ಯಡ್ರಾಮಿ ತಾಲೂಕಿನ ಪತ್ರಕರ್ತರಿಗೆ ಯಾವುದೇ ತೊಂದರೆ ಆಗದಂತೆ ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಬೇಕು ಎಂದು ಪತ್ರಕರ್ತರ ಸಂಘ ಆಗ್ರಹಿಸಿದೆ.

ಈ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಮೇಶ್ ಆಲೂರು, ಗೌರವಾಧ್ಯಕ್ಷ ಪ್ರಕಾಶ್‌ ಆಲಬಾಳ, ರವೀಂದ್ರ ವಕೀಲ, ವಿಜಯಕುಮಾರ್ ಕಲ್ಲಾ, ಶರಣಪ್ಪ ಎನ್. ನೆರಡಗಿ, ರಾಜು ಮುದ್ದಡಗಿ, ಮೊಹ್ಮದ್‌ ಗೌಸ್ ಇನಾಮ್ದಾರ್, ಶರಣಪ್ಪ ಬಡಿಗೇರ್, ನಾಗರಾಜ ಶಹಾಬಾದಕರ್, ಸಿದ್ದು ಕಾಮನಕೆರಿ, ಲಕ್ಷ್ಮಿಕಾಂತ್ ಕುಲಕರ್ಣಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News