×
Ad

ಕಲಬುರಗಿ| ಪತ್ರಕರ್ತನ ಮೇಲೆ ಹಲ್ಲೆ: ಆರೋಪಿಗಳನ್ನು ಬಂಧಿಸುವಂತೆ ಪತ್ರಕರ್ತರ ಸಂಘ ಆಗ್ರಹ

Update: 2025-12-09 21:27 IST

ಕಲಬುರಗಿ: ಯಡ್ರಾಮಿ ತಾಲೂಕಿನಲ್ಲಿ ಪತ್ರಕರ್ತ ಪ್ರಶಾಂತ್ ಚವ್ಹಾಣ ಮೇಲೆ ಹಲ್ಲೆ ನಡೆಸಿದ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸೇಡಂ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಹಾಯಕ ಆಯುಕ್ತರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.  

ಪತ್ರಕರ್ತರ ಧೈರ್ಯವನ್ನು ಕುಂಠಿತಗೊಳಿಸುವ ಉದ್ದೇಶದಿಂದ ಈ ದಾಳಿ ನಡೆದಿದೆ. ಘಟನೆಯಿಂದ ಜಿಲ್ಲೆಯ ಪತ್ರಕರ್ತರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪತ್ರಿಕಾ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದರೂ ವರದಿಗಾರರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸಂಘದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದರು. ಹಲ್ಲೆಗೆ ಒಳಗಾದ ಪತ್ರಕರ್ತರಿಗೆ ರಕ್ಷಣೆ ಒದಗಿಸಬೇಕು. ಕಿಡಿಗೇಡಿಗಳನ್ನು ತಕ್ಷಣ ಬಂಧಿಸಲು ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ರಾಜ್ಯದಲ್ಲಿ ಪತ್ರಕರ್ತರ ಮೇಲೆ ನಡೆಯುತ್ತಿರುವ ಹಲ್ಲೆ ತಡೆಗಟ್ಟಲು ಪತ್ರಕರ್ತರ ರಕ್ಷಣಾ ನೀತಿ ಜಾರಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ವೇಳೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಶರಣು ಮಹಗಾಂವ್, ಕಾರ್ಯದರ್ಶಿ ಸಿದ್ದಲಿಂಗಯ್ಯ ಸ್ವಾಮಿ ಆಡಕಿ, ನಾಗಯ್ಯ ಸ್ವಾಮಿ ಬೊಮ್ನಳ್ಳಿ, ಅವಿನಾಶ್ ಬೊರಂಚಿ, ಶರಣಯ್ಯ ಸ್ವಾಮಿ ಬೊಮ್ನಳ್ಳಿ, ಜಗನ್ನಾಥ ತರನಳ್ಳಿ, ಸುಧೀರ್ ಬಿರಾದಾರ್, ರಾಧಾಕೃಷ್ಣ ಕೆ , ಶಫೀಕ್ ಉಡಗಿ, ಸುನೀಲ್ ರಾಣಿವಾಲ್, ಗಣೇಶ ನೀಲಹಳ್ಳಿ ಉಪಸ್ಥಿತರಿದ್ದರು. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News