×
Ad

ಕಲಬುರಗಿ | ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ : ಹಲವರು ಪೊಲೀಸ್ ವಶಕ್ಕೆ

Update: 2025-11-01 09:25 IST

ಕಲಬುರಗಿ: ನಾಡಿನೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಸಡಗರ ಸಂಭ್ರಮದಲ್ಲೇ ಕಲಬುರಗಿ ನಗರದಲ್ಲಿ ಪ್ರತ್ಯೇಕ ರಾಜ್ಯಕ್ಕಾಗಿ ಪ್ರತ್ಯೇಕ ಧ್ವಜಾರೋಹಣ ಮಾಡಲು ಯತ್ನಿಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ನೇತೃತ್ವದಲ್ಲಿ ನಗರದ ಜಗತ್ ವೃತ್ತದಿಂದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತಡೆಡೆಗೆ ತೆರಳುತ್ತಿರುವಾಗ ಮಾರ್ಗಮಧ್ಯೆಯೇ ನರಿಬೋಳ ಸೇರಿದಂತೆ ಹಲವು ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ 371(ಜೆ) ಕಲಂ ಅಡಿ ವಿಶೇಷ ಪ್ರಾಶಸ್ತ್ಯ ನೀಡಿದರೂ ಸರಿಯಾದ ಪ್ರಮಾಣದಲ್ಲಿ ಈ ಭಾಗ ಅಭಿವೃದ್ಧಿಯಾಗುತ್ತಿಲ್ಲ. ರಾಜ್ಯೋತ್ಸವ ಪ್ರಶಸ್ತಿ ವಿಚಾರದಲ್ಲಿ ಪ್ರತಿವರ್ಷ ಈ ಭಾಗಕ್ಕೆ ಮಲತಾಯಿ ಧೋರಣೆ ಮಾಡುತ್ತಾ ಬರಲಾಗಿದೆ ಎಂದು ಹೋರಾಟಗಾರರು, ಸರ್ಕಾರದ ವಿರುದ್ಧ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News