×
Ad

ಕಲಬುರಗಿ | 'ಮತಗಳ್ಳತನ' ಯತ್ನ ಪ್ರಕರಣ ; ಸಾವಿರಾರು ವೋಟರ್ ಐಡಿಗಳು ಪತ್ತೆ : ವರದಿ

Update: 2025-10-17 16:08 IST
ಸಾಂದರ್ಭಿಕ ಚಿತ್ರ PC | PTI

ಕಲಬುರಗಿ: ರಾಜ್ಯದಲ್ಲಿ ಕೆಲವೆಡೆ 'ಮತಗಳ್ಳತನ' ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ (SIT) ಕಲಬುರಗಿಯಲ್ಲಿ ಮಹತ್ವದ ದಾಖಲೆಗಳನ್ನು ಪತ್ತೆ ಹಚ್ಚಿದೆ ಎಂದು ವರದಿಯಾಗಿದೆ.

ಬೆಂಗಳೂರಿನಿಂದ ಕಲಬುರಗಿಗೆ ಆಗಮಿಸಿರುವ ಎಸ್ಐಟಿ ಅಧಿಕಾರಿಗಳು ನಗರದ ಐದು ಪ್ರಮುಖ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ನಗರದ ಯದುಲ್ಲಾ ಕಾಲೋನಿ ಸಮೀಪದ ಮನೆಯೊಂದರಲ್ಲಿ ಸಾವಿರಾರು ವೋಟರ್ ಐಡಿಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ದಾಳಿಯ ಸಂದರ್ಭದಲ್ಲಿ ಎಸ್ಐಟಿ ಅಧಿಕಾರಿಗಳು 15 ಮೊಬೈಲ್ ಫೋನ್‌ಗಳು ಮತ್ತು 7 ಲ್ಯಾಪ್‌ಟಾಪ್‌ಗಳನ್ನು ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

ಕಲಬುರಗಿ ನಗರದ ಜಂಜಂ ಕಾಲೋನಿಯಲ್ಲಿರುವ ವ್ಯಕ್ತಿಯೊಬ್ಬರ ನಿವಾಸದ ಮೇಲೂ ಎಸ್ಐಟಿ ಅಧಿಕಾರಿಗಳು ದಾಳಿ ನಡೆಸಿ ಶೋಧ ಕಾರ್ಯ ಕೈಗೊಂಡಿದ್ದಾರೆ. ಎಸ್ಪಿ ದರ್ಜೆಯ ಅಧಿಕಾರಿಗಳು ಸೇರಿದಂತೆ ಹಲವು ಅಧಿಕಾರಿಗಳು ಈ ದಾಳಿ ಮತ್ತು ಪರಿಶೀಲನೆಯಲ್ಲಿ ಭಾಗವಹಿಸಿದ್ದಾರೆ.

'ಮತಗಳ್ಳತನ' ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳಿಂದ ಕಲಬುರಗಿಯಲ್ಲಿ ಶೋಧ ಕಾರ್ಯ ಗುರುವಾರ ಸಹ ಮುಂದುವರೆದಿದೆ. ಗುರುವಾರ ಮತ್ತೆ ಕೆಲವರ ಮನೆಗಳ ಮೇಲೆ ದಾಳಿ ನಡೆಸಿ, ವಿವಿಧ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

2023ರ ವಿಧಾನಸಭಾ ಚುನಾವಣೆಗಿಂತ ಮುಂಚೆಯೇ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ 6 ಸಾವಿರಕ್ಕೂ ಹೆಚ್ಚು ಮತಗಳನ್ನು ಡಿಲಿಟ್ ಮಾಡಲು ಯತ್ನಿಸಲಾಗಿತ್ತು ಎಂಬ ಆರೋಪ ಕೇಳಿಬಂದಿತ್ತು. ಇದೀಗ ಅದೇ ಪ್ರಕರಣ ಕುರಿತಾಗಿ ತನಿಖಾ ತಂಡ ಮತ್ತಷ್ಟು ಜಾಲ ಬೀಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News