ಕಲಬುರಗಿ | ಪ್ರತಿಭಾವಂತ ವಿದ್ಯಾರ್ಥಿನಿಯರಿಗೆ ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ ವತಿಯಿಂದ ಪ್ರಶಸ್ತಿ ಪ್ರದಾನ

Update: 2026-08-09 20:01 IST

ಕಲಬುರಗಿ: ಬೋರ್ಡ್ ಆಫ್ ಇಸ್ಲಾಮಿಕ್ ಎಜುಕೇಶನ್ (BIE) ಕರ್ನಾಟಕ ವತಿಯಿಂದ ಕಲಬುರಗಿಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಜಿಲ್ಲಾಮಟ್ಟದಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿನಿಯರು, ನಗರದ ವಿವಿಧ ಬಡಾವಣೆಗಳ ಶಾಖಾ ಮಟ್ಟದ ಟಾಪರ್‌ಗಳು ಹಾಗೂ ಸೆಂಟರ್ ಡಿಪ್ಲೊಮಾ ಕೋರ್ಸ್‌ನಲ್ಲಿ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿನಿಯರಿಗೆ ಪ್ರಶಸ್ತಿ ಹಾಗೂ ಪ್ರಮಾಣಪತ್ರಗಳನ್ನು ಪ್ರದಾನ ಮಾಡಲಾಯಿತು.

ನಗರದ ಸಂಗತ್ರಾಶವಾಡಿಯ ಹಿದಾಯತ್ ಸೆಂಟರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿನಿಯರ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜೊತೆಗೆ ನೈತಿಕ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬೆಳೆಸುವ ಉದ್ದೇಶದಿಂದ BIE ನಡೆಸುತ್ತಿರುವ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಕುರಿತು ಕಾರ್ಯಕ್ರಮದಲ್ಲಿ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ BIE ಕರ್ನಾಟಕದ ಕಾರ್ಯದರ್ಶಿ ರಿಯಾಜ್ ಅಹ್ಮದ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಲಬುರಗಿಯ ಖ್ಯಾತ ಕಲಾವಿದ ಹಾಗೂ ರಾಷ್ಟಪತಿಯಿಂದ ಬಹುಮಾನ ಪುರಸ್ಕೃತ ಡಾ. ರಹಮಾನ್ ಪಟೇಲ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತೆ ಇಸ್ಲಾಮಿ ಹಿಂದ್ ಕಲಬುರಗಿ ಸಂಘಟಕ ಜಾಕಿರ್ ಹುಸೇನ್ ವಹಿಸಿದ್ದರು.

ಈ ಸಂದರ್ಭದಲ್ಲಿ ಹಿರಿಯ ಕಲಾವಿದ ಅಯಾಜ್ ಪಟೇಲ್, ಉತ್ತರ ಘಟಕದ ಅಮೀರ್ ಮುಖಾಮ್ ಮಜಹರುದ್ದೀನ್ , ಅಮೀನ್ ಹುಸೇನ್ರಜ್ವಿಲ, ಮೊಹಿಯೊದ್ದೀನ್ ಖುಸ್ರೊ, ಅಮೀರುಲ್ ಹಸನ್ ಸೇರಿದಂತೆ BIE ಹಾಗೂ ಶೈಕ್ಷಣಿಕ ಕ್ಷೇತ್ರದ ಪ್ರಮುಖರು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರ ಸಾಧನೆಯನ್ನು ಅಭಿನಂದಿಸಿದ ಗಣ್ಯರು, ಶಿಕ್ಷಣದಲ್ಲಿ ಉನ್ನತ ಗುರಿ ಹೊಂದಿ ಸಮಾಜಕ್ಕೆ ಮಾದರಿಯಾಗುವಂತೆ ಕರೆ ನೀಡಿದರು. ಸಮಾರಂಭದಲ್ಲಿ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪಾಲಕರು, ವಿದ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.



Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News