ಕಲಬುರಗಿ | ಫೆ.28 ರಂದು ವಿಭಾಗಮಟ್ಟದ ಅಧಿಕಾರಿಗಳಿಗೆ ಅರಿವು ಕಾರ್ಯಕ್ರಮ
ಕಲಬುರಗಿ : ಕಲ್ಯಾಣ ಕರ್ನಾಟಕದಲ್ಲಿ ಮಕ್ಕಳ ಸ್ಥಿತಿ ಗತಿ, ಶಾಲೆಯಿಂದ ಹೊರಗುಳಿದ ಮಕ್ಕಳು, ಮಕ್ಕಳ ಭಿಕ್ಷಾಟನೆ ಹಾಗೂ ಅನಧಿಕೃತ ಕೋಚಿಂಗ್ ಸೆಂಟರ್ ಗಳ ಕುರಿತು ವಿಭಾಗಮಟ್ಟದ ಅಧಿಕಾರಿಗಳಿಗೆ ಫೆ.28 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮಗಾಂಧಿ ಸಭಾಂಗಣದಲ್ಲಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಕಲಬುರಗಿ ವಿಭಾಗದ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹಿಂದುಗಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ, ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕ ಮಟ್ಟದ ಕಾರ್ಯನಿರ್ವಾಹಕ ಅಧಿಕಾರಿಗಳು, ತಹಶೀಲ್ದಾರರು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಬಿ.ಇ.ಓ, ಬಿ.ಆರ್.ಸಿ, ಸಿ.ಆರ್.ಸಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹಾಗೂ ಸರ್ಕಾರಿ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಮಕ್ಕಳ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಸೇರಿದಂತೆ ಒಟ್ಟು ವಿವಿಧ ಜಿಲ್ಲೆಗಳ 300 ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.