×
Ad

ಕಲಬುರಗಿ | ಬೀದಿ ಬದಿಯ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ ಕುರಿತು ತಿಳುವಳಿಕೆ ಕಾರ್ಯಕ್ರಮ

Update: 2025-06-27 22:43 IST

ಕಲಬುರಗಿ: ಬೆಂಗಳೂರಿನ ಆಹಾರ ಸುರಕ್ಷತೆ ಮತ್ತುಗುಣಮಟ್ಟ ಇಲಾಖೆಯ ಆಯುಕ್ತರ ಆದೇಶದ ಮೇರೆಗೆ ಕಲಬುರಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಕಲಬುರಗಿ ನಗರದಲ್ಲಿ ಶುಕ್ರವಾರ ಬೀದಿ ಬದಿಯ ವ್ಯಾಪಾರಿಗಳಿಗೆ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿನ ಶುಚಿತ್ವ ನೈರ್ಮಲ್ಯತೆ ಹಾಗೂ ಗುಣಮಟ್ಟ ಕುರಿತು ತಪಾಸಣೆ ಮಾಡಿ ಅರಿವು ಮೂಡಿಸಲಾಯಿತು.

ಜಿಲ್ಲಾ ಅಂಕಿತ ಅಧಿಕಾರಿಗಳಾದ ಡಾ.ರತ್ನಾಕರ ತೋರಣ ಹಾಗೂ ಕಲಬುರಗಿ ಕಲಬುರಗಿ ಮಹಾನಗರಪಾಲಿಕೆ ಆಹಾರ ಸುರಕ್ಷತಾಧಿಕಾರಿ ಆಂಜನೇಯ ಬೈಕಾರ ಅವರು ಕಲಬುರಗಿ ನಗರದಲ್ಲಿ ಬೀದಿ ಬದಿಯ ವ್ಯಾಪಾರಿಗಳಿಗೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 2011 ರನ್ವಯ ಆಹಾರ ತಯಾರಿಕೆ ಮತ್ತು ವಿತರಣೆಯಲ್ಲಿನ ಶುಚಿತ್ವ ನೈರ್ಮಲ್ಯತೆ ಹಾಗೂ ಗುಣಮಟ್ಟ ಕುರಿತು ಕಲಬುರಗಿ ನಗರದಲ್ಲಿನ ಕೇಂದ್ರ ಬಸ್ ನಿಲ್ದಾಣ, ಸರದಾರ ವಲ್ಲಭಭಾಯಿ ಪಟೇಲ್ ವೃತ್ತ (ತಿಮ್ಮಾಪುರ ಚೌಕ್) ಮತ್ತು ರೈಲ್ವೆ ಸ್ಟೇಷನ್‌ ಏರಿಯಾಗಳಲ್ಲಿರುವ ಬೀದಿ ಬದಿಯ ವ್ಯಾಪಾರಿಗಳನ್ನು ಭೇಟಿ ನೀಡಿ ತಪಾಸಣೆ ನಡೆಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ ಬಗ್ಗೆ ತಿಳುವಳಿಕೆ ಮೂಡಿಸಿ, ನೋಂದಣಿ ಮಾಡಿಕೊಳ್ಳಬೇಕೆಂದು ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News