×
Ad

ಕಲಬುರಗಿ | 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕವಿಗೋಷ್ಠಿ, ರಾಜ್ಯೋತ್ಸವ ಪುರಸ್ಕಾರ : ಬಿ.ಎಚ್.ನಿರಗುಡಿ

Update: 2025-11-21 22:44 IST

ಕಲಬುರಗಿ: 70ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಲಬುರಗಿ ಸಾಂಸ್ಕೃತಿಕ ಪ್ರತಿಷ್ಠಾನ ವತಿಯಿಂದ ನ.22ರ ಸಂಜೆ 5ಗಂಟೆಗೆ ನಗರದ ಅನ್ನಪೂರ್ಣ ಕ್ರಾಸ್ ಸಮೀಪದ ಕಲಾಮಂಡಲದಲ್ಲಿ ಕವಿಗೋಷ್ಠಿ, ಪುಸ್ತಕ ಬಿಡುಗಡೆ ಹಾಗೂ ರಾಜ್ಯೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ ಎಂದು ಪ್ರತಿಷ್ಠಾನದ ಅಧ್ಯಕ್ಷರೂ ಆಗಿರುವ ಪುಸ್ತಕ ಪ್ರಾಧಿಕಾರದ ಸದಸ್ಯ ಬಿ.ಎಚ್.ನಿರಗುಡಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಶ್ರೀನಿವಾಸ ಸರಡಗಿಯ ಡಾ.ರೇವಣಸಿದ್ಧ ಶಿವಾಚಾರ್ಯರು ಸಾನ್ನಿಧ್ಯ ವಹಿಸಲಿದ್ದು, ಕೆಕೆಆರ್ ಟಿಸಿ ಅಧ್ಯಕ್ಷ ಅರುಣಕುಮಾರ್ ಎಂ.ವೈ.ಪಾಟೀಲ್ ಉದ್ಘಾಟಿಸಲಿದ್ದಾರೆ. ನವಕರ್ನಾಟಕ ರೈತ ಸಂಘದ ಅಧ್ಯಕ್ಷ ದಯಾನಂದ ಪಾಟೀಲ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಖ್ಯಾತ ವೈದ್ಯ ಡಾ.ಎಸ್.ಎಸ್. ಗುಬ್ಬಿ, ಕಲ್ಯಾಣರಾವ್‌ ಪಾಟೀಲ್, ಮಹಿಪಾಲರೆಡ್ಡಿ, ಕಾಂಗ್ರೆಸ್ ಮುಖಂಡ ಕಿಶೋರ್ ಗಾಯಕ್ವಾಡ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರೊ.ಜಿ.ಎಸ್.ಮಾಲಿಪಾಟೀಲ್, ರೇಣುಕಾಚಾರ್ಯ ಸ್ಥಾವರಮಠ, ದಸ್ತಗೀರ ನದಾಫ್ ಯಳಸಂಗಿ, ಸಿದ್ಧರಾಮ ಸರಸಂಬಿ ಸೇರಿದಂತೆ ಮತ್ತಿತರ ಸಾಧಕರಿಗೆ 2025ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ ಪ್ರದಾನ ಮಾಡಲಾಗುವುದು. ಜೊತೆಗೆ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಅನೇಕ ಕವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಬಿ.ಎಚ್.ನಿರಗುಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News