ಕಲಬುರಗಿ | ಭೀಮಾ ಕೋರೆಗಾಂವ್ ವಿಜಯೋತ್ಸವ : ಜ.1ರಂದು ದಲಿತರ ಬೃಹತ್ ಸಮಾವೇಶ
Update: 2024-12-30 21:32 IST
ಕಲಬುರಗಿ : ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಬುಧವಾರ ಜ.1ರಂದು ಭೀಮಾ ಕೋರೆಗಾಂವ್ ವಿಜಯೋತ್ಸವ ಅಂಗವಾಗಿ ದಲಿತರ ಸ್ವಾಭಿಮಾನ ಜಾಗೃತಿ ದಿನ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಸಂಚಾಲಕ ಮಹಾದೇವ ತರನಳ್ಳಿ ತಿಳಿಸಿದ್ದಾರೆ.
ಶಹಾಬಾದ್ ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಅಂದು ಸಾಯಂಕಾಲ 4:30 ಗಂಟೆಗೆ ಕಲಬುರಗಿ ನಗರದ ಡಾ.ಬಾಬಾ ಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಬಹಿರಂಗ ಸಭೆ ನಡೆಯಲಿದೆ ಎಂದು ಹೇಳಿದರು.
ಶಹಾಬಾದ್ ತಾಲ್ಲೂಕಿನಿಂದ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಸುಮಾರು 200 ಕಾರ್ಯಕರ್ತರ ಜೊತೆಗೆ ಹಿತೈಷಿಗಳು, ಭೀಮ ಅಭಿಮಾನಿಗಳು, ಪ್ರಗತಿಪರರು ಅಂದಿನ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮನವಿ ಮಾಡಿದ್ದಾರೆ.