ಕಲಬುರಗಿ | ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ : ಇಬ್ಬರು ಮೃತ್ಯು
Update: 2024-02-26 15:51 IST
ಕಲಬುರಗಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಜಿಲ್ಲೆಯ ಅವರ ಗ್ರಾಮದ ಹತ್ತಿರ ಸೋಮವಾರ ನಡೆದಿದೆ ಎಂದು ವರದಿಯಾಗಿದೆ
ಗುರುನಾಥ್ (46) ಹಾಗೂ ಸಂಗೀತ (35) ಮೃತರು ಎಂದು ಗುರುತಿಸಲಾಗಿದೆ. ಮೃತಪಟ್ಟಿರುವ ಇಬ್ಬರು ಸವಾರರನ್ನು ಮಾವ, ಸೊಸೆ ಎಂದು ಹೇಳಲಾಗಿದೆ.
ಘಟನಾ ಸ್ಥಳಕ್ಕೆ ಕಲಬುರಗಿ ಸಂಚಾರಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.