×
Ad

ಕಲಬುರಗಿ: ಅಪರಿಚಿತ ವಾಹನ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2025-12-26 14:24 IST

ಕಲಬುರಗಿ: ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಓರ್ವ ಗಾಯಗೊಂಡಿರುವ ಘಟನೆ ಅಫಜಲಪುರ - ದುಧನಿ ಮಾರ್ಗಮಧ್ಯೆ ಇರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಅಫಜಲಪುರ ಪಟ್ಟಣದ ನಿವಾಸಿ ಅನ್ವರ್ ಸಾಬ್ ಬನ್ನಟ್ಟಿ(50) ಮೃತ ವ್ಯಕ್ತಿ. ಸಹಸವಾರ ಉಮರ್ ಅಲಿ ಗಾಯಗೊಂಡಿದ್ದು, ಅವರನ್ನು ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸ್ಕೂಟಿಯಲ್ಲಿ ಅನ್ವರ್ ಹಾಗೂ ಉಮರ್ ಅಲಿ ಅವರು ಅಫಜಲಪುರ ದಿಂದ ಅಕ್ಕಲಕೋಟೆ ಕಡೆಗೆ ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News