×
Ad

ಕಲಬುರಗಿ | ಸರಕಾರಿ ಸ್ವಾಯತ್ತ ಮಹಾವಿದ್ಯಾಲಯದಲ್ಲಿ ಪಕ್ಷಿ ವೀಕ್ಷಣೆ ಕಾರ್ಯಕ್ರಮ

Update: 2026-01-22 19:19 IST

ಕಲಬುರಗಿ: ನಗರದ ಸರ್ಕಾರಿ ಸ್ವಾಯತ್ತ ಮಹಾವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಪಕ್ಷಿ ವೀಕ್ಷಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ವಿದ್ಯಾರ್ಥಿಗಳಲ್ಲಿ ಪಕ್ಷಿಗಳ ಕುರಿತು ಅರಿವು ಮೂಡಿಸುವುದು, ಅವುಗಳ ನಡೆ-ನುಡಿಗಳು ಹಾಗೂ ವಿಶೇಷ ವೈಶಿಷ್ಟ್ಯಗಳನ್ನು ಪರಿಚಯಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿತ್ತು. ಗುಲ್ಬರ್ಗಾ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಬೆಳಗ್ಗೆ 6.30ರಿಂದ 9.30ರವರೆಗೆ ನಡೆದ ಪಕ್ಷಿ ವೀಕ್ಷಣೆಯಲ್ಲಿ 25ಕ್ಕೂ ಹೆಚ್ಚು ವಿವಿಧ ಜಾತಿಯ ಪಕ್ಷಿಗಳನ್ನು ಗುರುತಿಸಲಾಯಿತು.

ಈ ವೇಳೆ ಪಕ್ಷಿಗಳ ವಿಭಿನ್ನ ಭಂಗಿ ಹಾಗೂ ಚಟುವಟಿಕೆಗಳನ್ನು ಕ್ಯಾಮರದಲ್ಲಿ ಸೆರೆಹಿಡಿಯಲಾಯಿತು. ವಿಶೇಷವಾಗಿ ಕಾಪರ್ ಸ್ಮಿತ್ ಬಾರ್ಬೆಟ್ (ಕಂಚುಕುಟಿಕ) ಮರದಲ್ಲಿ ಹೊಳ್ಳೆ ಮಾಡುವ ವಿಧಾನ ಹಾಗೂ ಬಾಲದಂಡೆ ಹಕ್ಕಿಯ ಮನಮೋಹಕ ಹಾರಾಟದ ಬಗ್ಗೆ ವಿದ್ಯಾರ್ಥಿಗಳಿಗೆ ವಿವರಿಸಲಾಯಿತು.

ಚಿತ್ತಾಪುರ ವಲಯ ಅರಣ್ಯಾಧಿಕಾರಿ ವಿಜಯಕುಮಾರ್ ಅವರು ಮಾತನಾಡಿ, ಪಕ್ಷಿಗಳನ್ನು ವೀಕ್ಷಿಸುವ ಮೂಲಕ ಅವುಗಳ ಕುರಿತ ಕುತೂಹಲಕರ ಮಾಹಿತಿಯನ್ನು ದಾಖಲಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಪಕ್ಷಿಗಳ ಹೆಸರು, ವರ್ತನೆ ಹಾಗೂ ವಾಸಸ್ಥಾನಗಳ ಕುರಿತು ಹೆಚ್ಚಿನ ಮಾಹಿತಿಯನ್ನು ಆಸಕ್ತಿಯಿಂದ ತಿಳಿದುಕೊಂಡರು.

ಪ್ರಾಣಿಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಮಹೇಶ್, ಡಾ. ರಾಜಶೇಖರ್, ಡಾ. ಅನಿತಾ, ಐಶ್ವರ್ಯ, ಆಸಿಫ್ ಹಾಗೂ ಆಸಕ್ತ ಪಕ್ಷಿ ವೀಕ್ಷಣೆ ತಂಡದ ಪವನ್ ಮೋಹನ್ ರಾವ್, ಅಭಿಷೇಕ್ ಉಪ್ಪಾರ್ ಅವರು ಪಕ್ಷಿಗಳ ವಿವಿಧ ವರ್ತನಾ ಲಕ್ಷಣಗಳನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಹಾಗೂ ಕಲಬುರಗಿ ಪಕ್ಷಿ ವೀಕ್ಷಣೆ ತಂಡದ ಸದಸ್ಯರು ಭಾಗವಹಿಸಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News