Kalaburagi | ಮಾಜಿ ಸಚಿವ ಬಿ.ಸಿ.ನಾಗೇಶ್ ನಿಧನಕ್ಕೆ ಬಿಜೆಪಿ ಜಿಲ್ಲಾ ಘಟಕದಿಂದ ಸಂತಾಪ

Update: 2026-08-19 19:17 IST

ಕಲಬುರಗಿ: ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಭಾರತೀಯ ಜನತಾ ಪಕ್ಷದ ಕಲಬುರಗಿ ಜಿಲ್ಲಾ ಘಟಕ ಸಂತಾಪ ಸೂಚಿಸಿತು.

ನಗರದಲ್ಲಿ ನಡೆಯುತ್ತಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರೋಧಿ ಅಹೋರಾತ್ರಿ ಧರಣಿ ಸತ್ಯಾಗ್ರಹದ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬಿ.ಸಿ. ನಾಗೇಶ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಿದರು.

ಈ ವೇಳೆ ಮುಖಂಡರು, ರಾಜ್ಯದ ಶಿಕ್ಷಣ ಕ್ಷೇತ್ರಕ್ಕೆ ಬಿ.ಸಿ. ನಾಗೇಶ್ ಅವರು ನೀಡಿದ ಕೊಡುಗೆಗಳನ್ನು ಸ್ಮರಿಸಿದರು. ಅವರ ಅಗಲಿಕೆ ಪಕ್ಷ ಹಾಗೂ ಸಾರ್ವಜನಿಕ ಜೀವನಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಸಂತಾಪ ವ್ಯಕ್ತಪಡಿಸಿದರು.

ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣದ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕ ನಡೆಸುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಪ್ರತಿಭಟನೆಯಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ,ಬಿಜೆಪಿ ನಗರ ಅಧ್ಯಕ್ಷ ಚಂದು ಪಾಟೀಲ,ಮಾಜಿ ಶಾಸಕ ರಾಜಕುಮಾರ ಪಾಟೀಲ ತೆಲ್ಕೂರ, ಸಹ ಪ್ರಭಾರಿ ಶರಣಪ್ಪ ತಳವಾರ, ಆಳಂದ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗೂಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಬಿರಾದಾರ, ಬಸವರಾಜ ಬೆಣ್ಣೂರಕರ್, ಶೋಭಾ ಬಾಣಿ, ಉಮೇಶ ಪಾಟೀಲ, ಶಿವಯೋಗಿ ನಾಗನಹಳ್ಳಿ, ಮಹಿಳಾ ಮೋರ್ಚಾ ಅಧ್ಯಕ್ಷೆ ಗೌರಿ ಚಿಚಕೋಟಿ, ಸಂಜಯ್ ಮಿಸ್ಕಿನ್, ಜಿಲ್ಲಾ ಉಪಾಧ್ಯಕ್ಷ ಶ್ರೀಶೈಲ ಪಾಟೀಲ, ಸಂತೋಷ ಗಡಂತಿ, ಹಣಮಂತರಾವ್ ಮಾಲಾಜಿ, ಸಂತೋಷ ಹಾದಿಮನಿ, ಆನಂದ ಪಾಟೀಲ, ಯುವಮೋರ್ಚಾ ಜಿಲ್ಲಾಧ್ಯಕ್ಷ ವೀರು ಪಾಟೀಲ, ಎಸ್.ಸಿ.ಮೋರ್ಚಾ ಅಧ್ಯಕ್ಷ ಮಹೇಂದ್ರ ಪೂಜಾರಿ, ಓಬಿಸಿ ಮೋರ್ಚಾ ಅಧ್ಯಕ್ಷ ಶಿವಕುಮಾರ ಪುಚಾಲಿ, ಮಹಿಳಾ ಪ್ರಧಾನ ಕಾರ್ಯದರ್ಶಿ ನಂದಾ ಬಾಬಾ, ನಿರ್ಮಲಾ ಬೆಸ್ತೇ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಕುಮಾರ ಬಂಡೆ, ಶರಣಗೌಡ ಪಾಟೀಲ, ಡಾ. ಸುಧಾ ಹಲಕಾಯಿ, ಆಳಂದ ಪ್ರಧಾನ ಕಾರ್ಯದರ್ಶಿ ಸೀತಾರಾಮ ಜಮಾದಾರ, ಪ್ರಕಾಶ ಮಾನೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News