×
Ad

ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡನ ಹತ್ಯೆ

Update: 2024-02-29 17:38 IST

ಕಲಬುರಗಿ : ಕಾರಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಮಾರಕಾಸ್ತ್ರಗಳಿಂದ ಕೊಚ್ಚಿ ಬಿಜೆಪಿ ಮುಖಂಡ ನೋರ್ವನನ್ನು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಆಳಂದ ತಾಲೂಕಿನ ಸರಸಂಬಾ ಗ್ರಾಮದಲ್ಲಿ ವರದಿಯಾಗಿದೆ.

ಬಿಜೆಪಿ ಮುಖಂಡ ಮಹಾಂತಪ್ಪ ಸಿದ್ದರಾಮಪ್ಪ ಆಲೂರೆ(45) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಸರಸಂಬಾ ಗ್ರಾಮದಲ್ಲಿ ಧನ ಲಕ್ಷ್ಮೀ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದ ಮಹಾಂತಪ್ಪ, ಸತತ ಮೂರು ಬಾರಿ ಗ್ರಾಮ ಪಂಚಾಯಿತಿ ಸದಸ್ಯರಾಗಿಯೂ ಆಯ್ಕೆಯಾಗಿದ್ದರು ಎಂದು ಹೇಳಲಾಗಿದೆ.

ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ದುಷ್ಕರ್ಮಿಗಳು ಪರಾರಿಯಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಾಂತಪ್ಪ ಅವರನ್ನು ಮಹಾರಾಷ್ಟ್ರದ ಸೋಲಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇದುವರೆಗೆ ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ.

ಮಾದನ ಹಿಪ್ಪರಗಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News