×
Ad

ಕಲಬುರಗಿ | ಪಿಎಸ್‌ಐ ಹಗರಣದ ಪ್ರಮುಖ ಆರೋಪಿ ಮನೆಗೆ ಬಿಜೆಪಿ ಸಂಸದ ಉಮೇಶ್ ಜಾಧವ್ ಭೇಟಿ!

Update: 2024-04-17 17:50 IST

ಕಲಬುರಗಿ : ಪಿಎಸ್‌ಐ ನೇಮಕಾತಿಯಲ್ಲಿ ಹಗರಣ ನಡೆಸಿ ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಬುಧವಾರ ಕಲಬುರಗಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ತೆರಳಿ ಮತಯಾಚಿಸಿ, ಬೆಂಬಲ ಕೇಳಿರುವುದು ವಿವಾದಕ್ಕೆ ಕಾರಣವಾಗಿದೆ.

ಪಿಎಸ್‌ಐ ಪರೀಕ್ಷೆ ವೇಳೆ ಅಕ್ರಮ ಮಾಡಲು ಯತ್ನಿಸಿ ಸಿಕ್ಕಿಬಿದ್ದು, ಜೈಲುಪಾಲಾಗಿರುವ ಆರ್‌ಡಿ ಪಾಟೀಲ್ ಮನೆಗೆ ಕಲಬುರಗಿ ಸಂಸದ ಉಮೇಶ್ ಜಾಧವ್ ಭೇಟಿ ನೀಡಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಅಘಜಲಪುರದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಾತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಆರ್.ಡಿ ಪಾಟೀಲ್ ಅನ್ನು ಚುನಾವಣೆಯಲ್ಲಿ ಬೆಂಬಲಿಸುವಂತೆ ಸಂಸದ ಜಾಧವ್ ಕೇಳಿಕೊಂಡಿದ್ದಾರೆ ಎನ್ನಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News