Kalaburagi | ಸಮವಸ್ತ್ರ ನಿಯಮ ಹಿಂಪಡೆದ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ ಪ್ರತಿಭಟನೆ
Update: 2026-05-16 17:49 IST
ಕಲಬುರಗಿ: ರಾಜ್ಯದ ಶೈಕ್ಷಣಿಕ ಕೇಂದ್ರಗಳಲ್ಲಿ ಸಮಾನತೆ ಹಾಗೂ ಶಿಸ್ತು ಕಾಪಾಡುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸಮವಸ್ತ್ರ ನಿಯಮವನ್ನು ಕಾಂಗ್ರೆಸ್ ಸರ್ಕಾರ ಹಿಂಪಡೆದಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾಕಾರರು ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಚಂದ್ರಕಾoತ ಪಾಟೀಲ, ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ ಬಗಲಿ, ಮಾಜಿ ಸಂಸದ ಡಾ. ಉಮೇಶ ಜಾಧವ, ಮಾಜಿ ಸಚಿವ ಬಾಬುರಾವ ಚವ್ಹಾಣ, ಗಿರಿರಾಜ ಯಳಮೇಲಿ, ಡಾ.ಇoದಿರಾ ಶಕ್ತಿ, ಡಾ. ಸುಧಾ ಹಾಲಕಾಯಿ, ಲಿಂಗರಾಜ ಬಿರಾದಾರ, ಶಿವ ಅಷ್ಟಗಿ, ಸಪ್ನಾ ಮಂಗಲಗಿ, ಸವಿತಾ ಪಾಟೀಲ, ಸುಶೀಲಾ ರಾಠೋಡ್, ರಾಜೇಶ್ವರಿ ಮೇತ್ರೆ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.