×
Ad

ಕಲಬುರಗಿ | ಧರ್ಮಸ್ಥಳದ ಉಳಿವಿಗಾಗಿ ಘೋಷವಾಕ್ಯದಡಿ ಬಿಜೆಪಿಯಿಂದ ಪ್ರತಿಭಟನೆ

Update: 2025-08-25 19:46 IST

ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಉಳಿವಿಗಾಗಿ ಎಂಬ ಘೋಷವಾಕ್ಯದಡಿ ನಗರ ಬಿಜೆಪಿ ವತಿಯಿಂದ ಇಲ್ಲಿನ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು.

ಈ ವೇಳೆ ಬಿಜೆಪಿ ಮುಖಂಡರು, ಕಾರ್ಯಕರ್ತರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಅರುಣಕುಮಾರ ಪಾಟೀಲ್‌ ಮಾತನಾಡಿದರು.

ಬಿಜೆಪಿ ಕಲಬುರಗಿ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ, ಮುಖಂಡರಾದ ಅವ್ವಣ್ಣ ಮ್ಯಾಕೇರಿ, ಮಹಾದೇವ ಬೆಳಮಗಿ, ದೇವೇಂದ್ರ ಸೇರಿದಂತೆ ಬಿಜೆಪಿಯ ಮಹಿಳಾ ಸಂಘಟನೆಯ ಪದಾಧಿಕಾರಿಗಳು, ಮತ್ತಿತರ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News