×
Ad

ಕಲಬುರಗಿ | ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಖಂಡಿಸಿ ಬಿಜೆಪಿ ಎಸ್‌ಸಿ ಮೋರ್ಚಾ ವತಿಯಿಂದ ಪ್ರತಿಭಟನೆ

Update: 2025-08-11 16:30 IST

ಕಲಬುರಗಿ: ರಾಜ್ಯದಲ್ಲಿ ಎಸ್‌ಸಿಪಿ, ಟಿಎಸ್‌ಪಿ ಹಣ ದುರ್ಬಳಕೆ ಆಗುತ್ತಿರುವುದನ್ನು ಖಂಡಿಸಿ, ಬಿಜೆಪಿ ಎಸ್‌ಸಿ ಮೋರ್ಚಾ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಇದಕ್ಕೂ ಮುನ್ನ ನಗರದ ಸರ್ದಾರ್ ವಲ್ಲಭ್ ಭಾಯ್ ಪಟೇಲ್ ವೃತ್ತದಿಂದ ಸಮಾಜ ಕಲ್ಯಾಣ ಇಲಾಖೆ ಕಚೇರಿವರೆಗೆ ತಮಟೆ ಬಾರಿಸುವ ಮೂಲಕ ರ್‍ಯಾಲಿ ನಡೆಸಲಾಯಿತು.

ಈ ವೇಳೆ ಮಾತನಾಡಿದ ಮಾಜಿ ಸಚಿವ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಎನ್.ಮಹೇಶ್ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ದಲಿತ ಜನಾಂಗದ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCP , TSP ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಕೂಡಲೇ ಇದನ್ನು ಹಿಂದಕ್ಕೆ ಪಡೆದು ಯಥಾಸ್ಥಿತಿಯಲ್ಲಿ ದಲಿತರ ಕಲ್ಯಾಣಕ್ಕೆ ಅನುದಾನವನ್ನು ಬಳಸಬೇಕೆಂದು ಎಂದು ಆಗ್ರಹಿಸಿದ್ದಾರೆ.

ಈ ಸಂದರ್ಭಲ್ಲಿ ಬಿಜೆಪಿ ಮುಖಂಡರಾದ ಅಂಬಾರಾಯ ಅಷ್ಟಗಿ, ರಾಜು ವಾಡೇಕರ್, ಬಿಜೆಪಿ ನಗರಾಧ್ಯಕ್ಷ ಚಂದು ಪಾಟೀಲ್, ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ವಿಶಾಲ ದರ್ಗಿ, ಶಿವ ಅಷ್ಟಗಿ, ಬಿಜೆಪಿ ಸಂತೋಷ್ ಹಾದಿಮನಿ, ಹರ್ಷಾನಂದ ಗುತ್ತೇದಾರ್, ಲಿಂಗರಾಜ ಬಿರಾದಾರ, ಶರಣಪ್ಪ ತಳವಾರ್, ಮಹದೇವಪ್ಪ ಬೆಳಮಗಿ, ಸೇರಿದಂತೆ ಜಿಲ್ಲೆಯ ದಲಿತ ಸಮಾಜದ ಮುಖಂಡರು, ಎಸ್ಸಿ ಮೋರ್ಚಾದ ಪದಾಧಿಕಾರಿಗಳು, ಜಿಲ್ಲಾ, ಮಂಡಲ, ಮೋರ್ಚಾ ಪ್ರಕೋಷ್ಠ ಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News