ಸಾಂದರ್ಭಿಕ ಚಿತ್ರ

ಕಲಬುರಗಿ: ವಾಡಿ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಹಿರೇನಂದೂರು ಮತ್ತು ರೈಲು ನಿಲ್ದಾಣದ ನಡುವಿನ ರೈಲ್ವೆ ಸೇತುವೆಯ ಮೇಲಿನ ಅಪ್ ರೈಲು ಹಳಿಯಲ್ಲಿ ಸುಮಾರು 55ರಿಂದ 60 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ನ.25ರಂದು ಮೃತದೇಹ ಪತ್ತೆಯಾಗಿದ್ದು, ಈ ಕುರಿತು ವಾಡಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್. ಸಂಖ್ಯೆ 107/2026ರ ಅಡಿಯಲ್ಲಿ ಬಿಎನ್‌ಎಸ್ ಕಲಂ 194ರ ಪ್ರಕಾರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮೃತ ಮಹಿಳೆ ಸುಮಾರು 5.4 ಅಡಿ ಎತ್ತರ, ಸಾಧಾರಣ ಮೈಕಟ್ಟು ಹಾಗೂ ಮೈಬಣ್ಣ ಹೊಂದಿದ್ದು, ದುಂಡು ಮುಖ ಮತ್ತು ಉದ್ದನೆಯ ಮೂಗು ಹೊಂದಿದ್ದಾರೆ. ತಲೆಯಲ್ಲಿ ಸುಮಾರು 10 ಕಪ್ಪು-ಬಿಳಿ ಮಿಶ್ರಿತ ಕೂದಲುಗಳಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹದ ಮೇಲೆ ಗುಲಾಬಿ ಬಣ್ಣದ ಸ್ವೆಟರ್, ಪಿಂಕ್ ಬಣ್ಣದ ಬ್ಲೌಸ್ ಹಾಗೂ ಕಂದು ಬಣ್ಣದ ಹರಿದ ಸೀರೆ ಇತ್ತು. ಕಪ್ಪು ಬಣ್ಣದ ಸ್ಲಿಪ್ಪರ್ ಧರಿಸಿದ್ದು, ಕುತ್ತಿಗೆಯಲ್ಲಿ ಲಿಂಗದ ಆಕಾರದ ಲಾಕೆಟ್ ಇರುವ ಸರವಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತ ಮಹಿಳೆಯ ವಾರಸುದಾರರು ಅಥವಾ ಅವರ ಗುರುತು ತಿಳಿದವರು ವಾಡಿ ರೈಲ್ವೆ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈಲ್ವೆ ಪೊಲೀಸ್ ಕಂಟ್ರೋಲ್ ರೂಂ 080-22871291, ವಾಡಿ ರೈಲ್ವೆ ಪೊಲೀಸ್ ಠಾಣೆ 08476-202244 ಅಥವಾ ಪೊಲೀಸ್ ಉಪನಿರೀಕ್ಷಕರ ಮೊಬೈಲ್ ಸಂಖ್ಯೆ 9480802132 ಅನ್ನು ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ