×
Ad

ಕಲಬುರಗಿ | ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆಯಿಂದ ದಿಟ್ಟ ಹೆಜ್ಜೆ : ಬಸವರಾಜ್ ಶೆಟ್ಟಿ

Update: 2025-11-17 21:35 IST

ಕಲಬುರಗಿ: ಪ್ರಸಕ್ತ ವರ್ಷದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಇಲಾಖೆ ದಿಟ್ಟ ಹೆಜ್ಜೆ ಕೈಗೊಂಡಿದ್ದು, ಅದಕ್ಕೆ ಪೂರಕವಾಗಿ ಶಿಕ್ಷಕರು ಆ ದಿಟ್ಟ ಹೆಜ್ಜೆಗಳನ್ನು ಅನುಪಾಲನೆ ಮಾಡುವ ಅಗತ್ಯವಿದೆ ಎಂದು ಕಲಬುರಗಿ ಡಯಟ್ ಉಪನಿರ್ದೇಶಕರಾದ ಬಸವರಾಜ್ ಶೆಟ್ಟಿ ಹೇಳಿದರು.

ಅವರು ಶನಿವಾರ ಶಹಾಬಾದ್‌ ನಗರದ ಸೇಂಟ್ ಥಾಮಸ್ ಶಾಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಎಸೆಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಆಯೋಜಿಲಾದ ವಿಷಯವಾರು ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಕಳೆದ ವರ್ಷ ಫಲಿತಾಂಶದಲ್ಲಿ ಇಳಿಕೆಯಾದ ಹಿನ್ನೆಲೆಯಲ್ಲಿ ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ಬರುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು. ಅಲ್ಲದೇ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ಹೆಚ್ಚಿನ ಒತ್ತು ನೀಡಬೇಕು. ಸಿ ಹಾಗೂ ಎನ್‍ಸಿ ವಿದ್ಯಾರ್ಥಿಗಳಿಗೆ 40 ಅಂಕಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಕಾರ್ಯಯೋಜನೆ ರೂಪಿಸಲಾಗಿದ್ದು, ಅದನ್ನು ನಿಮ್ಮ ನಿಮ್ಮ ಶಾಲೆಯಲ್ಲಿ ಅನುಷ್ಠಾನಗೊಳಿಸಿದರೆ ಫಲಿತಾಂಶ ಬರಲು ಸಾಧ್ಯ ಎಂದು ಹೇಳಿದರು.

ಚಿತ್ತಾಪೂರ ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ ಬಿರಾದಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ಎಲ್ಲಾ ಶಿಕ್ಷಕರು ಫಲಿತಾಂಶ ಸುಧಾರಣೆಗಾಗಿ ಅನೇಕ ಅಂಶಗಳನ್ನು ಅನುಪಾಲನೆ ಮಾಡುತ್ತ ಬಂದಿದ್ದೀರಿ. ಸದ್ಯ ಸಿ ಹಾಗೂ ಎನ್‍ಸಿ ವಿದ್ಯಾರ್ಥಿಗಳಿಗೆ ಉತ್ತೀರ್ಣಗೊಳಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ ನಿಮ್ಮ ಶಾಲೆಯ ಫಲಿತಾಂಶ ನೂರಕ್ಕೆ ನೂರು ಬರಲಿದೆ. ಈ ಕಾರ್ಯಾಗಾರದಲ್ಲಿ ಎಲ್ಲಾ ವಿಷಯಗಳ ಬಗ್ಗೆ ನೀಲಿ ನಕ್ಷೆ, ಪ್ರಶ್ನೆಪತ್ರಿಕೆಗಳ ವಿನ್ಯಾಸ, ಸಂಭವನೀಯ ಪ್ರಶ್ನೆಗಳ ಬಗ್ಗೆ ತಿಳಿ ಹೇಳಲಾಗುವುದು. ಇದನ್ನು ಮನಗಂಡು ಶಾಲೆಯಲ್ಲಿ ಅನುಷ್ಠಾನ ಮಾಡತಕ್ಕದ್ದು. ಕಳೆದ ಬಾರಿ ಶೇ.40 ಫಲಿತಾಂಶ ಬಂದಿದ್ದು, ಈ ಬಾರಿ ನೂರಕ್ಕೆ ನೂರರಷ್ಟು ಫಲಿತಾಂಶ ತರುವ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಲಬುರಗಿ ಡಯಟ್‍ನ ಉಪನ್ಯಾಸಕರಾದ ಡಾ.ಲಿಂಗರಾಜ ಮೂಲಿಮನಿ, ಪ್ರಕಾಶ ನಾಯ್ಕೋಡಿ, ಸುಮಂಗಲಾ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ವೇದಿಕೆಯ ಮೇಲಿದ್ದರು.

ಆರು ವಿಷಯಗಳ ತಾಲೂಕಿನ ಎಲ್ಲಾ ಶಿಕ್ಷಕರಿಗೆ ವಿಶೇಷವಾಗಿ ಪ್ರೋಜೆಕ್ಟರ್ ಮೂಲಕ ಸಂಪನ್ಮೂಲ ವ್ಯಕ್ತಿಗಳಿಂದ ಹೇಳಿಕೊಡಲಾಯಿತು.

ಇಸಿಓ ಅಬ್ಬಿಗೇರಿ ಶರಣಪ್ಪ ನಿರೂಪಿಸಿದರು, ಸುಜಾತಾ ಹಿರೇಮಠ ಪ್ರಾರ್ಥಿಸಿದರು, ಕ್ಷೇತ್ರ ಸಮನ್ವಯಾಧಿಕಾರಿ ಮಲ್ಲಿಕಾರ್ಜುನ ಸೇಡಂ ಸ್ವಾಗತಿಸಿದರು, ಇಸಿಓ ರವೀಂದ್ರ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News