×
Ad

ಕಲಬುರಗಿ | ಗುಲ್ಬರ್ಗಾ ವಿವಿಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಬೂಕರ್ ವಿಜೇತೆ ದೀಪಾ ಬಸ್ತಿ ಭೇಟಿ

Update: 2025-12-08 19:26 IST

ಕಲಬುರಗಿ: ಅಂತರರಾಷ್ಟ್ರೀಯ ಖ್ಯಾತಿ ಪಡೆದ ಬರಹಗಾರ್ತಿ, ಅನುವಾದಕಿ, ಬೂಕರ್ ಪ್ರಶಸ್ತಿ ಪುರಸ್ಕೃತರಾದ ದೀಪಾ ಬಸ್ತಿ ಅವರು ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯಲ್ಲಿ ಕಲ್ಯಾಣ ಕರ್ನಾಟಕದ ಬರಹಗಾರರ ಗ್ಯಾಲರಿಯನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿ, ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ನಂತರ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರು ಮತ್ತು ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಅಧ್ಯಕ್ಷರಾದ ಪ್ರೊ.ಎಚ್.ಟಿ. ಪೋತೆಯವರು ದೀಪಾ ಬಸ್ತಿ ಯವರನ್ನು ಸನ್ಮಾನಿಸಿ, ಗೌರವಿಸಿದರು.

ಈ ಸಂದರ್ಭದಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಪ್ರೊ.ವಿಕ್ರಮ್ ವಿಸಾಜಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಗುವಿವಿಯ ಕಲಾ ನಿಕಾಯದ ನೂತನ ಡೀನ್ ರಾಗಿ ಆಯ್ಕೆಯಾದ ಪ್ರೊ.ಎಚ್.ಟಿ.ಪೋತೆ ಅವರನ್ನು ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ವತಿಯಿಂದ ಸತ್ಕರಿಸಲಾಯಿತು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಪದವಿ ಕಾಲೇಜುಗಳ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷ, ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಸದಸ್ಯ ಡಾ.ಖಾಜಾವಲಿ ಈಚನಾಳ, ಅಧ್ಯಾಪಕರ ಸಂಘದ ಉಪಾಧ್ಯಕ್ಷ, ಕನ್ನಡ ಸ್ನಾತಕ ಅಧ್ಯಯನ ಮಂಡಳಿ ಸದಸ್ಯ ಡಾ. ಪಂಡಿತ್ ಬಿ.ಕೆ, ಗುವಿವಿಯ ಉರ್ದು ವಿಭಾಗದ ಮುಖ್ಯಸ್ಥರಾದ ಪ್ರೊ.ಅಬ್ದುಲ ರಬ್ ಉಸ್ತಾದ್, ಕನ್ನಡ ಸ್ನಾತಕ ಅಧ್ಯಯನ ಮಂಡಳಿಯ ಸದಸ್ಯರಾದ ಪ್ರೊ. ಶ್ರೀಶೈಲ್ ನಾಗರಾಳ, ಪ್ರೊ. ಸೂರ್ಯಕಾಂತ ಸುಜಾತ, ಪ್ರೊ. ಅಮೃತ ಕಟಕೆ, ಡಾ. ಸುಜಾತಾ ಚೆಲುವಾದಿ, ಕನ್ನಡ ಅಧ್ಯಯನ ಸಂಸ್ಥೆಯ ಆಧ್ಯಾಪಕರು ಹಾಗೂ ಇತರೆ ಭಾಷಾ ವಿಭಾಗಗಳ ಅತಿಥಿ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಾಪಕರಾದ ಡಾ.ಎಂ.ಬಿ ಕಟ್ಟಿ ನಿರೂಪಿಸಿ, ಸ್ವಾಗತಿಸಿ, ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News