ಕಲಬುರಗಿ | ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳ ಬಂಧನ
Update: 2025-11-03 21:44 IST
ಕಲಬುರಗಿ: ರಾಘವೇಂದ್ರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಯನಗರದಲ್ಲಿ ಕಲ್ಲಿನಿಂದ ಜಜ್ಜಿ ರಿತೇಶ್ ಧೂಳಪ್ಪ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದಲ್ಲಿ ಪೈಂಟರ್ ಆಗಿ ಕೆಲಸ ಮಾಡುತ್ತಿದ್ದ ಸಚಿನ್ ಜಗನ್ನಾಥ್ ಡೊಂಗರಗಾoವ್(35) ಹಾಗೂ ಶ್ರೀಕಾಂತ್ ಲಕ್ಷ್ಮಣ್ ಭಾವಿಕಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.
ವಿಜಯನಗರದ ನಿವಾಸಿ ರಿತೇಶ್ ಧೂಳಪ್ಪ ಕೊಲೆ ಕುರಿತು ಪ್ರಕರಣ ದಾಖಲಿಸಿಕೊಂಡ ಆರ್.ಜಿ ನಗರದ ಪೊಲೀಸರು, ಕ್ಷಿಪ್ರ ತನಿಖೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.