ಕಲಬುರಗಿ | ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಆಚರಣೆ
Update: 2025-05-15 21:55 IST
ಕಲಬುರಗಿ: ನಗರದ ಕೆ.ಹೆಚ್.ಬಿ.ಗ್ರೀನ್ ಪಾರ್ಕ್ ಅಪಾರ್ಟ್ಮೆಂಟ್ ಕಾಲೋನಿಯಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಬಾಬು ಜಗ ಜೀವನ್ ರಾಮ್ ಅವರ ಜಯಂತಿಯನ್ನು ಆಚರಿಸಲಾಯಿತು.
ಈ ವೇಳೆ ರಕ್ತದಾನ ಮಾಡುವ ಮೂಲಕ ಕಾಲೋನಿ ಜನರು ಸಮಾಜಕ್ಕೆ ಸಮಾನತೆಯ ಸಂದೇಶ ಸಾರಿದರು.
ಕಲ್ಯಾಣ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರಾದ ಮಹೇಶಕುಮಾರ್ ಹೆಬ್ಬಾಳೆ ಅವರು ಮಾತನಾಡಿದರು.
ಕೆ.ಹೆಚ್.ಬಿ.ಗ್ರೀನ್ ಪಾರ್ಕ್ ಅಸೋಸಿಯೇಷನ್ ಅಧ್ಯಕ್ಷ ಸಂಜು ಶೆಟ್ಟಿ, ರಕ್ತ ದಾನಿಗಳಿಗೆ ಹಣ್ಣು ಹಂಪಲು ವಿತರಿಸಿ ಸಮಾಜಕ್ಕೆ ಸಹಕಾರಿಯಾಗುವಂತೆ ಕಾಲೋನಿಯ ಜನರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಲೋನಿಯ ಮುಖಂಡರು, ಜಿಮ್ಸ್ ಆಸ್ಪತ್ರೆಯ ಸಿಬ್ಬಂದಿ ಹಾಜರಿದ್ದರು.