ಕಲಬುರಗಿ: ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ದೇವರ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ 2.50 ಲಕ್ಷ ರೂ. ನಗದು ಸೇರಿದಂತೆ ಚಿನ್ನ ಮತ್ತು ಬೆಳ್ಳಿ ಆಭರಣಗಳನ್ನು ಕಳವು ಮಾಡಿರುವ ಪರಾರಿಯಾಗಿರುವ ಘಟನೆ ನಗರದ ಉದನೂರು ರಸ್ತೆಯ ಅಮೋಘ ನಗರದಲ್ಲಿ ನಡೆದಿದೆ.

ಉಮೇಶ ಎಂಬುವವರಿಗೆ ಸೇರಿದ ಮನೆಯಲ್ಲಿ ಕಳ್ಳತನ ನಡೆದಿದ್ದು, ಮನೆಯವರು ತಮ್ಮ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಮನೆಗೆ ನುಗ್ಗಿದ್ದಾರೆ. ಮನೆಯ ಬೀಗ ಮುರಿದು ಒಳಪ್ರವೇಶಿಸಿದ ಕಳ್ಳರು ದೇವರ ಹುಂಡಿಯಲ್ಲಿ ಸಂಗ್ರಹಿಸಿಟ್ಟಿದ್ದ ಸುಮಾರು 2.50 ಲಕ್ಷ ರೂ. ನಗದು, ಮೂರು ಗ್ರಾಂ ಚಿನ್ನ ಹಾಗೂ 26 ತೊಲೆ ಬೆಳ್ಳಿ ಕಳವು ಮಾಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸಂಬಂಧ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ