×
Ad

ಕಲಬುರಗಿ | ಕೃಷಿ ಜಮೀನಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆ ಮೃತದೇಹ ಪತ್ತೆ

Update: 2024-07-14 19:38 IST

ಕಲಬುರಗಿ : ಕೃಷಿ ಜಮೀನೊಂದರಲ್ಲಿ ಮಹಿಳೆಯೊಬ್ಬರನ್ನು ಹತ್ಯೆ ಮಾಡಿ ಸುಟ್ಟು ಹಾಕಿರುವ ಘಟನೆ ಕಮಲಾಪುರ ತಾಲೂಕಿನ ನಾಗೂರ ಗ್ರಾಮದ ಹೊರವಲಯದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ರವಿವಾರ ಘಟನಾ ಸ್ಥಳಕ್ಕೆ ಎಎಸ್ಪಿ ಬಿಂದುರಾಣಿ, ಪಿಎಸ್ಐ ಆಶಾ ರಾಠೋಡ, ಕಮಲಾಪುರ ಸಿಪಿಐ ವಿ.ನಾರಾಯಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಗೂರ ಗ್ರಾಮದ ಖಾಸಗಿ ಕೃಷಿ ಜಮೀನಿನ ದಂಡೆಯಲ್ಲಿ ಅರ್ಧ ಸುಟ್ಟಿರುವ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಒಂದು ದಿನ ಹಿಂದೆ ಈ ಕೊಲೆ ನಡೆದಿರಬಹುದೆಂಬ ಅಂದಾಜಿಸಲಾಗಿದೆ.

ಕೊಲೆಯಾದ ಮಹಿಳೆಯ ವಿಳಾಸ ಮತ್ತು ಗುರುತು ಪತ್ತೆಯಾಗಿಲ್ಲ. ಆರೋಪಿಗಳು ಸಾಕ್ಷಿ ನಾಶ ಮಾಡುವ ಉದ್ದೇಶದಿಂದ ಈ ದುಷ್ಕೃತ್ಯ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಈ ಕುರಿತು ಮಹಾಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News