×
Ad

Kalaburagi | ವಿಜ್ಞಾನ ಬರಹಗಾರರು, ಪ್ರಕಾಶಕರಿಂದ ಪುಸ್ತಕಗಳ ಆಹ್ವಾನ

Update: 2026-07-09 19:12 IST

ಕಲಬುರಗಿ: ಕನ್ನಡದಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕಗಳ ಬರವಣಿಗೆಯನ್ನು ಪ್ರೋತ್ಸಾಹಿಸಲು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ಡಾ.ಟಿ.ಆರ್.ಅನಂತರಾಮು ಹೆಸರಿನಲ್ಲಿ ಜನಪ್ರಿಯ ವಿಜ್ಞಾನ ಪುಸ್ತಕ ಪ್ರಶಸ್ತಿಯನ್ನು ನೀಡುತ್ತಿದ್ದು, ವಿಜ್ಞಾನ ಬರಹಗಾರರು ಹಾಗೂ ಪ್ರಕಾಶಕರಿಂದ ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದ ಕನ್ನಡ ಪುಸ್ತಕಗಳನ್ನು ಆಹ್ವಾನಿಸಲಾಗಿದೆ ಎಂದು ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಆರ್. ಅವರು ತಿಳಿಸಿದ್ದಾರೆ.

ಆಯ್ಕೆಯಾದ ಜನಪ್ರಿಯ ವಿಜ್ಞಾನ ಪುಸ್ತಕಕ್ಕೆ 20,000 ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿಪತ್ರವನ್ನು ನೀಡಿ ಪುರಸ್ಕರಿಸಲಾಗುತ್ತದೆ. ಆಸಕ್ತಿಯುಳ್ಳ ಲೇಖಕರು/ಬರಹಗಾರು ಹಾಗೂ ಪ್ರಕಾಶಕರು 2026ರ ನವೆಂಬರ್ 30 ರೊಳಗಾಗಿ ಅಕಾಡೆಮಿಯ ವಿಳಾಸಕ್ಕೆ ಪುಸ್ತಕಗಳನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಕಾಡೆಮಿಯ https://kstacademy.in ವೆಬ್‍ಸೈಟ್‍ನ್ನು ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News