×
Ad

ಕಲಬುರಗಿ | ಜೂ.12, 13ರಂದು ಕ್ಯಾಂಪಸ್ ಸಂದರ್ಶನ

Update: 2025-06-10 19:27 IST

ಕಲಬುರಗಿ: ಬೆಂಗಳೂರಿನ ಮೆ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಮತ್ತು ಕೊನೆಯ ವರ್ಷದಲ್ಲಿ ಅಭ್ಯಸಿಸುತ್ತಿರುವ ಎಲೆಕ್ಟ್ರಿಶಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್ ಆಂಡ್ ಕೋಪಾ/ಪಾಸಾ ಅಭ್ಯರ್ಥಿಗಳಿಗೆ ಜೂ.12 ರಂದು ಬೆಳಿಗ್ಗೆ 9 ಗಂಟೆಗೆ ಹಾಗೂ ಫಿಟ್ಟರ್, ಟರ್ನರ್, ಮಷಿನಿಸ್ಟ್, ಎಮ್‍ಆರ್ ಎಸಿ, ಡಿಎಮ್‍ಎಮ್, ವೆಲ್ಡರ್ ಮತ್ತು ಎಲೆಕ್ಟ್ರೋಪ್ಲೇಟರ್ ವೃತ್ತಿಗಳ ಅಭ್ಯರ್ಥಿಗಳಿಗೆ ಜೂ.13 ರಂದು ಬೆಳಿಗ್ಗೆ 9 ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶುಕ್ಷು (ಅಪ್ರೆಂಟಿಶಿಪ್) ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ಪುರುಷ) ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಅಭ್ಯರ್ಥಿಗಳ ವಯೋಮಿತಿ 21 ವರ್ಷದೊಳಗಿರಬೇಕು (ಎಸ್.ಸಿ./ಎಸ್.ಟಿ. ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ವಿನಾಯತಿ ಇರುತ್ತದೆ). ಅಭ್ಯರ್ಥಿಗಳು ಮೇಲ್ಕಂಡ ದಿನದಂದು ನಡೆಯುವ ಸಂದರ್ಶನಕ್ಕೆ ವೈಯಕ್ತಿಕ ವಿವರ (ಬಯೋ ಡೇಟಾ) ಎಸೆಸೆಲ್ಸಿ ಮತ್ತು ಐಟಿಐ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವಚಿತ್ರಗಳು, ಆಧಾರ್ ಕಾರ್ಡ್ ಹಾಗೂ ಇತರೆ ದಾಖಲಾತಿಗಳೊಂದಿಗೆ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ಎಂ.ಎಸ್.ಕೆ.ಮಿಲ್ ರಸ್ತೆ ಕಲಬುರಗಿ ಇಲ್ಲಿ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಸೂಚನಾ ಫಲಕವನ್ನು ಹಾಗೂ ದೂರವಾಣಿ ಸಂಖ್ಯೆ 7259272146ಗೆ ಸಂಪರ್ಕಿಸಲು ಕೋರಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News