×
Ad

ಕಲಬುರಗಿ | ಶಾಸಕ ಬಸವರಾಜ ಮತ್ತಿಮಡು ಸಂಚರಿಸುತ್ತಿದ್ದ ಕಾರು ಪಲ್ಟಿ: ಗಾಯ

Update: 2024-01-14 12:21 IST

ಕಲಬುರಗಿ, ಜ.14: ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಸಂಚರಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ತಾಲೂಕಿನ ಪಾಳಾ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ.

ಘಟನೆಯಲ್ಲಿ ಶಾಸಕರು ಹಾಗೂ ಕಾರಿನಲ್ಲಿದ್ದ ಮುಖಂಡರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಸಕರು ಕಲಬುರಗಿಯ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಗ್ಗೆ ಪಾಳಾ ಗ್ರಾಮಕ್ಕೆ ತೆರಳಿದ್ದ ಶಾಸಕರು ಅಲ್ಲಿಂದ ಶಹಾಬಾದ್ ನಗರಕ್ಕೆ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News