×
Ad

ಕಲಬುರಗಿ | ಒಂದೂವರೆ ವರ್ಷದ ಮಗು ಆಸ್ಪತ್ರೆಯಲ್ಲಿ ಮೃತ್ಯು : ಅತ್ಯಾಚಾರದ ಶಂಕೆ, ಪ್ರಕರಣ ದಾಖಲು

Update: 2024-07-25 18:36 IST

ಕಲಬುರಗಿ : ಒಂದೂವರೆ ವರ್ಷದ ಮಗು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಸ್ಪತ್ರೆಯ ವೈದ್ಯರು ಅತ್ಯಾಚಾರ ನಡೆದಿರುವ ಕುರುಹುಗಳನ್ನು ಚಿಕಿತ್ಸೆ ವೇಳೆ ದೃಢಪಡಿಸಿದ್ದಾರೆ ಎಂದು ವರದಿಯಾಗಿದೆ.

ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರ ಮಗುವಿನ ಮೇಲೆ ವಿಕೃತಿ ಮೆರೆದ ಕುರುಹುಗಳು ಚಿಕಿತ್ಸೆ ವೇಳೆ ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗುತ್ತಿದ್ದಂತೆ ಪೋಷಕರು ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಮಗುವಿನ ಮೇಲೆ ಅತ್ಯಾಚಾರ ನಡೆಸಲು ಸಾಧ್ಯವಿಲ್ಲ. ಮಗು ಮನೆಯಲ್ಲಿಯೇ ಇತ್ತು. ಯಾರು ಕೂಡ ಇಂತಹ ಕೃತ್ಯ ನಡೆಸಲು ಸಾಧ್ಯವಿಲ್ಲ ಎಂದು ಪೋಷಕರು ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.

ಮನೆಯಲ್ಲಿ ಅಸ್ವಸ್ಥಗೊಂಡ ಮಗುವನ್ನು ಕಲಬುರಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ವೇಳೆ ವೈದ್ಯರು ವೈದ್ಯಕೀಯ ಕಾನೂನು ಪ್ರಕರಣಗಳ ಅಡಿಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಿರುವುದರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಮಗು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News