ಕಲಬುರಗಿ| ಆಸ್ಪತ್ರೆಯಲ್ಲಿ ಯುವತಿ ಜೊತೆ ಅನುಚಿತ ವರ್ತನೆ ಆರೋಪ: ವಾರ್ಡ್ ಬಾಯ್ ವಿರುದ್ಧ ಪ್ರಕರಣ ದಾಖಲು
Update: 2026-05-19 21:50 IST
ಕಲಬುರಗಿ: ಆಸ್ಪತ್ರೆಗೆ ಚಿಕಿತ್ಸೆಗೆಂದು ಬಂದ ಯುವತಿಯೊಂದಿಗೆ ಖಾಸಗಿ ಆಸ್ಪತ್ರೆಯ ವಾರ್ಡ್ ಬಾಯ್ ಅನುಚಿತವಾಗಿ ನಡೆದುಕೊಂಡಿರುವುದಾಗಿ ಆರೋಪಿಸಿ ಯುವತಿಯೊಬ್ಬಳು ದೂರು ದಾಖಲಿಸಿರುವ ಘಟನೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಆಸ್ಪತ್ರೆ ವಾರ್ಡ್ ಬಾಯ್ ಆಗಿರುವ ಅಂಬರೀಶ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮುಂಬೈ ಮೂಲದ ಯುವತಿಯನ್ನು ಆಸ್ಪತ್ರೆಯ ಆಪರೇಷನ್ ಥಿಯೇಟರ್ ಗೆ ಕರೆದೊಯ್ದು ಅನುಚಿತವಾಗಿ ವರ್ತಿಸಿರುವುದಾಗಿ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಈ ಕುರಿತು ಸ್ಟೇಷನ್ ಬಜಾರ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.