ಕಲಬುರಗಿ: ತಾಲೂಕಿನ ಇಂಗನಕಲ್ ಗ್ರಾಮದಲ್ಲಿ ಕನಕನಾಯಕರ ಜಯಂತ್ಯೋತ್ಸವವನ್ನು ಸಡಗರ, ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಲಾಯಿತು.

ಜಯಂತ್ಯೋತ್ಸವದ ಅಂಗವಾಗಿ ಕನಕನಾಯಕರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪನಮನ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಕನಕನಾಯಕರ ಆದರ್ಶಗಳು, ಸಮಾಜ ಸುಧಾರಣೆಗೆ ಅವರು ನೀಡಿದ ಕೊಡುಗೆಗಳು ಹಾಗೂ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಬಿಎಸ್ಪಿ ಕಲಬುರಗಿ ಜಿಲ್ಲಾ ಅಧ್ಯಕ್ಷ ಸುನೀಲ್ ಇಂಗನಕಲ್, ಕೋಲಿ ಸಮಾಜದ ಮುಖಂಡ ಮಲ್ಕಪ್ಪ ಟೆಂಗಳಿ ಹಾಗೂ ಸ್ಥಳೀಯ ಎಸ್‌ಡಿಎಂಸಿ ಅಧ್ಯಕ್ಷ ಶಿವಲಿಂಗಪ್ಪ ಉಣಚಿಕರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ನಾಗರಾಜ್ ಪೂಜಾರಿ, ಚಂದ್ರಶ್ಯಾ ಕಾಳಗಿ, ಮಲ್ಲಪ್ಪ ಕಾಳಗಿ, ಮಲ್ಲಿಕಾರ್ಜುನ ನಡುಗುಂದಿಕರ್, ಶೇಖಪ್ಪ ಟೆಂಗಳಿ, ಯಲ್ಲಾಲಿಂಗ ನಿಡಗುಂದಿ, ಹಣಮಂತ ಭೋವಿ ಸೇರಿದಂತೆ ಅನೇಕ ಯುವಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ಸಾಜಿದ್‌ ಅಲಿ/ವಾರ್ತಾಭಾರತಿ

ಕಲಬುರಗಿ ಜಿಲ್ಲಾ ವರದಿಗಾರರು

ಸಾಜಿದ್ ಅಲಿ ಅವರು 12 ವರ್ಷಗಳ ಪತ್ರಿಕೋದ್ಯಮ ಅನುಭವ ಹೊಂದಿದ್ದಾರೆ. ವಾರ್ತಾಭಾರತಿ ಮಂಗಳೂರು ಡೆಸ್ಕ್ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸಿರುವ ಇವರು, ಕಳೆದ ಏಳು ವರ್ಷಗಳಿಂದ ವಾರ್ತಾಭಾರತಿ ಡಿಜಿಟಲ್ ವೆಬ್‌ಸೈಟ್‌ನ ಕಲಬುರಗಿ ಜಿಲ್ಲಾ ವರದಿಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಪ್ರಸ್ತುತ ವಾರ್ತಾಭಾರತಿ ಪತ್ರಿಕೆಯ ಜಿಲ್ಲಾ ವರದಿಗಾರರಾಗಿ ಹಾಗೂ ಕಲ್ಯಾಣ ಕರ್ನಾಟಕ ವಿಭಾಗದ ಕೋಆರ್ಡಿನೇಟರ್ ಆಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ