×
Ad

ಕಲಬುರಗಿ | ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಘ ಸಂಸ್ಥೆಗಳ ಮುಖಂಡರೊಂದಿಗೆ ಸಿಇಓ ಸಭೆ

Update: 2025-05-07 00:15 IST

ಕಲಬುರಗಿ : ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲೆಯಲ್ಲಿನ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಎನ್‌ಜಿಓನ ಮುಖ್ಯಸ್ಥರು , ಸಂಘಗಳ ಮುಖ್ಯಸ್ಥರು ಹಾಗೂ MRW/VRW ಗಳೊಂದಿಗೆ ವಿಕಲಚೇತನರ ಹಕ್ಕುಗಳ ಅಧಿನಿಯಮ 2016 ರ ಕಾಯ್ದೆ ಕುರಿತು ಜಿಲ್ಲಾ ಪಂಚಾಯತ್‌ ಸಿಇಓ ಭವರಸಿಂಗ್ ಮಿನಾ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಿತು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್ ಅವರ ಸಹಯೋಗದೊಂದಿಗೆ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಮತ್ತು ಗ್ರಾಮ ಪಂಚಾಯತಿಗಳಲ್ಲಿನ ವಿಕಲಚೇತನರಿಗೆ ವಿಕಲಚೇತನರ ಹಕ್ಕುಗಳ ಅಧಿನಿಯಮ 2016 ರ ಕಾಯ್ದೆಯಂತೆ ವಿಕಲಚೇನರ ಸಮುದಾಯಕ್ಕೆ ಅಗತ್ಯವಿರುವ ಸೇವಾ ಸೌಲಭ್ಯಗಳನ್ನು ಜಿಲ್ಲೆಯಲ್ಲಿ ಕಲ್ಪಿಸಲು ಶೇ.5ರಷ್ಟು ಅನುದಾನ ಮೀಸಲಾತಿ ನಿಯಮಾನುಸಾರ ಅನುದಾನವನ್ನು ಉತ್ತಮ ರೀತಿಯಲ್ಲಿ ವಿನಿಯೋಗಿಸಲು ಕ್ರಿಯಾ ಯೋಜನೆ ಸಿದ್ದಪಡಿಸಿ ಅನುಮೋದನೆ ಪಡೆಯಲು ಸಭೆಯನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ನಿಮಿತ್ತ ಕಾರ್ಯ ನಿರ್ವಹಣಾ ಅಧಿಕಾರಿಗಳಿಗೆ ಜಿಲ್ಲೆಯ ವಿಕಲಚೇತನರ ಸಂಘ ಸಂಸ್ಥೆಗಳು ಹಾಗೂ MRW/ VRW ರವರು ಕಾರ್ಯಕರ್ತರು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News