ಕಲಬುರಗಿ | ಮಾ.8ರಂದು ಮುಖ್ಯಮಂತ್ರಿಗಳಿಂದ ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವಕ್ಕೆ ಚಾಲನೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಕಲಬುರಗಿ : ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ ಬೆಂಗಳೂರು ಇವರ ವತಿಯಿಂದ ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯ ಮಾದರಿಯಲ್ಲಿ ಒಟ್ಟು 1,166 ಕಿ.ಮೀ. ಉದ್ದದ ರಸ್ತೆಗಳನ್ನು 1,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿರುವ ಯೋಜನೆಯ ಪ್ರಾರಂಭೋತ್ಸವ) ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವದ ಉದ್ಘಾಟನಾ ಸಮಾರಂಭವನ್ನು ಮಾ.8 ರಂದು ಶನಿವಾರ ಬೆಳಿಗ್ಗೆ 11.30 ಗಂಟೆಗೆ ಜೇವಗಿ ತಾಲೂಕಿನ ಕಟ್ಟಿ ಸಂಗಾವಿಯ ತಾಯಿ ಮತ್ತು ಮಕ್ಕಳ ಸರ್ಕಾರಿ ಆಸ್ಪತ್ರೆ ಹತ್ತಿರದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಕಲ್ಯಾಣ ಪಥ ಯೋಜನೆಯ ಪ್ರಾರಂಭೋತ್ಸವಕ್ಕೆ ಚಾಲನೆ ನೀಡುವರು. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.
ರಾಜ್ಯದ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವ ಬಿ.ಜೆಡ್. ಜಮೀರ್ ಅಹ್ಮದ್ ಖಾನ್, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಈಶ್ವರ್ ಬಿ.ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ತಂಗಡಗಿ ಶಿವರಾಜ ಸಂಗಪ್ಪ, ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ಸಣ್ಣ ನೀರಾವರಿ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್.ಭೋಸರಾಜು, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಂಪನಗೌಡ ಬಾದರ್ಲಿ, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ, ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಹನಮಗೌಡ ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್, ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಎನ್.ಗಣೇಶ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷ ಬಸನಗೌಡ ತುರುವಿಹಾಳ, ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ರಾಯಚೂರ ಲೋಕಸಭಾ ಸದಸ್ಯ ಜಿ.ಕುಮಾರ್ ನಾಯಕ, ಬಳ್ಳಾರಿ ಲೋಕಸಭಾ ಸದಸ್ಯ ಈ.ತುಕಾರಾಮ್, ದಾವಣಗೆರೆ ಸಂಸದ ಡಾ.ಪ್ರಭಾ ಮಲ್ಲಿಕಾರ್ಜುನ್, ಕೊಪ್ಪಳ ಲೋಕಸಭಾ ಸದಸ್ಯ ರಾಜಶೇಖರ್ ಬಸವರಾಜ ಹಿಟ್ನಾಳ್, ಬೀದರ್ ಲೋಕಸಭಾ ಸದಸ್ಯ ಸಾಗರ ಈಶ್ವರ ಖಂಡ್ರೆ ಹಾಗೂ ಬಳ್ಳಾರಿ ರಾಜ್ಯಸಭಾ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್ ಗೌರವಾನ್ವಿತರ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಶಾಸಕರುಗಳಾದ ಪ್ರಭು ಬಿ.ಚವ್ಹಾಣ್, ಬಿ.ನಾಗೇಂದ್ರ, ಜಿ.ಹಂಪಯ್ಯ ನಾಯಕ, ಮಾನಪ್ಪ ಡಿ.ವಜ್ಜಲ್, ಡಾ.ಎಸ್.ಶಿವರಾಜ್ ಪಾಟೀಲ, ಕೆ.ರಾಘವೇಂದ್ರ ಹಿಟ್ನಾಳ್, ಹೆಚ್.ಆರ್.ಗವಿಯಪ್ಪ, ಕೆ.ನೇಮಿರಾಜ ನಾಯ್ಕ್, ಬಿ.ಎಮ್.ನಾಗರಾಜ್, ಶರಣು ಸಲಗರ, ಬಸವರಾಜ ಮತ್ತಿಮಡು, ಡಾ.ಅವಿನಾಶ ಉ. ಜಾಧವ, ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಅಲ್ಲಮಪ್ರಭು ಪಾಟೀಲ, ಬಿ.ದೇವೇಂದ್ರಪ್ಪ, ಗಾಲಿ ಜನಾರ್ಧನ ರೆಡ್ಡಿ, ಲತಾ ಮಲ್ಲಿಕಾರ್ಜುನ, ಈ. ಅನ್ನಪೂರ್ಣ, ಡಾ.ಶೈಲೇಂದ್ರ ಕೆ. ಬೆಲ್ದಾಳೆ, ಎಸ್.ಟಿ. ಶ್ರೀನಿವಾಸ, ಡಾ.ಸಿದ್ದಲಿಂಗಪ್ಪ ಎನ್.ಪಾಟೀಲ, ಶರಣಗೌಡ ಕಂದಕೂರ, ಕೃಷ್ಣ ನಾಯ್ಕ್, ರಾಜಾವೇಣುಗೋಪಾಲ ನಾಯಕ, ನಾರಾ ಭರತರೆಡ್ಡಿ, ಕರೆಮ್ಮ ಜಿ.ನಾಯಕ ಗೌರವಾನ್ವಿತರಾಗಿ ಪಾಲ್ಗೊಳ್ಳುವರು.
ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ.ನಮೋಶಿ, ಡಾ.ಬಿ.ಜಿ.ಪಾಟೀಲ, ಡಾ.ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ.ಸಾಬಣ್ಣ ತಳವಾರ, ವೈ.ಎಂ.ಸತೀಶ, ಶರಣಗೌಡ ಅ.ಪಾಟೀಲ ಬಯ್ಯಾಪುರ, ಭೀಮರಾವ ಬಿ.ಪಾಟೀಲ್, ಹೇಮಲತಾ ನಾಯಕ, ಬಸನಗೌಡ ಬಾದರ್ಲಿ, ಡಾ.ಎಂ.ಜಿ.ಮೂಳೆ, ಜಗದೇವ ಗುತ್ತೇದಾರ್ ಹಾಗೂ ಎ.ವಸಂತಕುಮಾರ್ ಅವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುವರು.