ಕಲಬುರಗಿ | ಎ.22ರಂದು ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರ
Update: 2025-04-20 19:00 IST
ಕಲಬುರಗಿ : ಕಲಬುರಗಿ ರಂಗಾಯಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎ.22 ರಂದು ಮಧ್ಯಾಹ್ನ 3 ಗಂಟೆಗೆ ಕಲಬುರಗಿ ರಂಗಾಯಣದ ಸಭಾಂಗಣದಲ್ಲಿ ಮಕ್ಕಳ ಹಬ್ಬ-2025 ಬೇಸಿಗೆ ರಂಗ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಉದ್ಘಾಟಿಸಲಿದ್ದು, ರಂಗಾಯಣದ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸುವರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ, ಗುಲಬರ್ಗಾ ವಿ.ವಿ. ಪೊಲೀಸ್ ಠಾಣೆಯ ಪಿ.ಐ ಸುಶೀಲಕುಮಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು. ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಂಗೀತ ಮತ್ತು ನೃತ್ಯ ಪ್ರದರ್ಶನ ನಡೆಯಲಿದೆ.