ಕಲಬುರಗಿ | ಪೊಲೀಸ್ ಠಾಣೆ ಎದುರೇ ಎರಡು ಗುಂಪುಗಳ ಮಧ್ಯೆ ಗಲಾಟೆ : ವಿಡಿಯೋ ವೈರಲ್
Update: 2025-05-20 16:51 IST
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಠಾಣೆಯ ಮುಂಭಾಗದಲ್ಲೇ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿರುವ ಘಟನೆ ಸೇಡಂ ತಾಲೂಕಿನ ಮಳಖೇಡ ಪೊಲೀಸ್ ಠಾಣೆಯಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಹೊಡೆದಾಟ ನಡೆಸಿದ್ದಾರೆ ಎನ್ನಲಾಗಿದ್ದು, ಇವರ ಹೊಡೆದಾಟ ತಡೆಯಲು ಪೊಲೀಸರೇ ಹರಸಾಹಸ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ
ಘಟನೆ ಮಳಖೇಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹೊಡೆದಾಟ ನಡೆಸಿರುವ ವಿಡಿಯೋ ವೈರಲ್ ಆಗುತ್ತಿದೆ.