×
Ad

ಕಲಬುರಗಿ | ಗ್ರಾಮದ ಸ್ವಚ್ಛತೆ ಪ್ರತಿಯೊಬ್ಬರ ಜವಾಬ್ದಾರಿ: ಸಿಇಒ ಭಂವರಸಿಂಗ್ ಮೀನಾ

Update: 2025-09-25 21:20 IST

ಕಲಬುರಗಿ : ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ಗ್ರಾ) ಯೋಜನೆಯಡಿ "ಸ್ವಚ್ಛತಾ ಹಿ ಸೇವಾ ಹೈ", "ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್" ಎಂಬ ಘೋಷವಾಕ್ಯದಡಿ ಸಾಮೂಹಿಕ ಶ್ರಮದಾನ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಗಿತ್ತು.

ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರಸಿಂಗ್ ಮೀನಾ, ರವರು ಸ್ವಚ್ಛತಾಗಾರರಿಗೆ ಸ್ವಚ್ಛತಾ ಕಿಟ್, ಸಮವಸ್ತ್ರ, ಗಮ್ಬೂಟು, ಹ್ಯಾಂಡಗ್ಲೋಸ್, ಮಾಸ್ಕ್ ಸ್ವಚ್ಛತೆ ಮಾಡಲು ಬೇಕಾಗುವ ಸಾಮಗ್ರಿಗಳನ್ನು ವಿತರಣೆ ಮಾಡುವ ಮೂಲಕ ಶ್ರಮದಾನ ಕಾರ್ಯಕ್ರಮಕ್ಕೆ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ಚಾಲನೆ ನೀಡಿದರು.

ನಂತರ, ಮಾತನಾಡಿದ ಅವರು ಪ್ರತಿ ಮನೆಯಲ್ಲಿ ಹಸಿ ಕಸ ಮತ್ತು ಒಣ ಕಸವನ್ನು ಬೇರ್ಪಡಿಸಬೇಕು ಹಾಗೂ ಗ್ರಾಮದ ಸ್ವಚ್ಛತೆಯನ್ನು ಕಾಪಡಿಕೊಂಡು ಪರಿಸರದ ಬಗ್ಗೆ ಜವಾಬ್ದಾರಿಯನ್ನು ಹೊಂದಿರಬೇಕು, ಪ್ರಸ್ತುತ ಕಲಬುರಗಿ ಜಿಲ್ಲೆಯ 261 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಯನ್ನು ಸ್ವಚ್ಛ ಸಂಕಿರ್ಣಗಳ ಮೂಲಕ ನಿರ್ವಹಣೆ ಮಾಡಲಾಗುತ್ತಿದೆ. ಇಲ್ಲಿ ಸ್ವಚ್ಛತಗಾರರ ಪಾತ್ರ ಬಹಳ ಮುಖ್ಯವಾಗಿರುತ್ತದೆ ಎಂದು ಹೇಳಿದರು.

ಶ್ರಮದಾನ ಕಾರ್ಯಕ್ರಮದಲ್ಲಿ ಜಗದೇವ ಬಿ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ ಕಲಬುರಗಿ, ಸೈಯದ ಪಟೇಲ, ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಪಂಚಾಯತ ಕಲಬುರಗಿ, ಮಲ್ಲಿನಾಥ ಕಿವುಡೆ, ಅಧ್ಯಕ್ಷರು ಅವರಾದ (ಬಿ), ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು, ಶಿವಾರಾಜ ಗ್ರಾಮ ಪಂಚಾಯತಿ ಸದಸ್ಯರು, ಬಂಡೆಪ್ಪ ಧನ್ನಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ ಮಿಷನ್ ಯೋಜನೆಯ ಜಿಲ್ಲಾ ಸಂಯೋಜಕರಾದ ಶ್ರೀಮತಿ ಗುರುಬಾಯಿ ಪಾಟೀಲ್ & ಪಾಪರೆಡ್ಡಿ ರವರು ಹಾಗೂ ತಾಲ್ಲೂಕ ಐ.ಇ.ಸಿ ಸಂಯೋಜಕರಾದ ಮೋಸಿನಖಾನ ರವರು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು ಹಾಜರಿದ್ದರು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ಮೊದಲಿಗೆ ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕರಾದ ಜಗದೇವ ಬಿ. ರವರು ಪ್ರತಿಜ್ಞಾವಿಧಿಯನ್ನು ಘೋಷಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News