×
Ad

ಕಲಬುರಗಿ | ಅನ್ನದಾತನ ಕಣ್ಣೀರಿಗೆ ಸ್ಪಂದಿಸಿದ ಸಿಎಂ ಸಿದ್ದರಾಮಯ್ಯ : ರಾಜು ಮಾಳಗಿ

Update: 2025-10-04 19:40 IST

ಕಲಬುರಗಿ: ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ನವರು 2000 ಕೋಟಿ ರೂ. ಘೋಷಣೆ ಮಾಡಿ ಅನ್ನದಾತನ ಕಣ್ಣೀರಿಗೆ ಸಿಎಂ ಸಿದ್ದರಾಮಯ್ಯನವರು ಸ್ಪಂದಿಸಿದ್ದಾರೆ ಎಂದು ಕಲಬುರಗಿ ದಕ್ಷಿಣ ಮತಕ್ಷೇತ್ರದ ಯುವ ಘಟಕದ ಅಧ್ಯಕ್ಷ ರಾಜು ಮಾಳಗಿ ಹೇಳಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಲವು ದಿನಗಳ ಹಿಂದೆ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದ ಹಾಗೂ ಮಹಾರಾಷ್ಟ್ರದ ಉಜ್ಜನಿ ಜಲಾಶಯದ ನೀರು ಭೀಮಾ ನದಿಗೆ ಬಿಟ್ಟಿದ್ದ ಪರಿಣಾಮ ಅಫಜಲಪುರ, ಜೇವರ್ಗಿ, ಆಳಂದ, ಚಿತ್ತಾಪುರ, ಸೇಡಂ, ಚಿಂಚೋಳಿ ಸೇರಿದಂತೆ ಅನೇಕ ಹಳ್ಳಿಗಳು ಜಲಾವೃತವಾಗಿ ಕಂಗಾಲಾಗಿದ್ದನ್ನು ಗಮನಿಸಿದ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ಸಿದ್ದರಾಮಯ್ಯಗೆ ಮಾಹಿತಿ ನೀಡಿದ್ದರು ಎಂದರು.

ಅತಿವೃಷ್ಟಿಯಿಂದ ಬೆಳೆ ಹಾಗೂ ಹಳ್ಳಿಗಳಲ್ಲಿ ಮನೆಗೆ ನುಗ್ಗಿದ ನೀರು ಇದ್ದನ್ನು ಸಂಸದ ರಾಧಾಕೃಷ್ಣ ದೊಡ್ಡಮನಿ ಅವರು ಗಮನಿಸಿ ಸುಮಾರು 3,500 ಸಾವಿರ ರೇಶನ್ ಕಿಟ್ ಬಡ ಕುಟುಂಬದವರಿಗೆ ವಿತರಣೆ ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಮಾತನಾಡಿ, ಅತಿವೃಷ್ಟಿ ಮಳೆಯಿಂದ ಬೆಳೆ ಹಾನಿ ಹಾಗೂ ಹಲವು ಮನೆಗಳು ಹಾನಿಯಾಗಿವೆ ಇದ್ದಕ್ಕೆ ಒಂದು ತಂಡ ರಚನೆ ಮಾಡಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ವರದಿ ಸಲ್ಲಿಸಿದ ಬಳಿಕ ಪರಿಹಾರದ ಹಣವನ್ನು ರೈತರಿಗೆ ನೀಡಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಯುವ ಘಟಕದ ಮಾಜಿ ಅಧ್ಯಕ್ಷ ಶಿವಾನಂದ ಹೊನಗುಂಟಿ, ಈರಣ್ಣಾ ಪಾಟೀಲ್ ಝಳಕಿ, ಟೈಗರ್ ವಿಘ್ನೇಶ್ವರ, ಮಹೇಂದ್ರ ನಾಯ್ಡು, ಶರಣಗೌಡ ಮಾಲಿ ಪಾಟೀಲ್, ಆಸೀಮ್ ಪಟೇಲ್, ಮಯೂರ ವಾಘಮಾರೆ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News