ಕಲಬುರಗಿ | ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಮುದಾಯದ ಸಹಕಾರ ಅಗತ್ಯ: ಡಾ.ಚಾಮರಾಜ ಡೊಡಮನಿ
ಕಲಬುರಗಿ: ಉಚಿತ ಕಡ್ಡಾಯ ಶಿಕ್ಷಣಕ್ಕೆ ಸಮುದಾಯದ ಸಹಕಾರ ಅಗತ್ಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎಂಟಮೊಲಜಿಸ್ಟ್ ಚಾಮರಾಜ ಡೊಡಮನಿ ಹೇಳಿದರು.
ಅವರು ಚಿತ್ತಾಪುರ ತಾಲ್ಲೂಕಿನ ಡೊನ್ನೂರ ಗ್ರಾಮದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು.
ಆರ್‌ಟಿಇ ಕಾಯ್ದೆಯ ಆಶಯಗಳನ್ನು ಯಶಸ್ವಿಯಾಗಿ ಜಾರಿಗೆ ತರಲು ಎಸ್‌ಡಿಎಂಸಿ, ಪೋಷಕರು, ಶಿಕ್ಷಕರು, ಗ್ರಾಮಸ್ಥರು ಹಾಗೂ ಹಳೆಯ ವಿದ್ಯಾರ್ಥಿಗಳ ಸಂಘ ಒಟ್ಟಾಗಿ ಕಾರ್ಯನಿರ್ವಹಿಸಬೇಕು. ಶಾಲೆಗಳ ಅಭಿವೃದ್ಧಿ ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಸಮಾಜದ ಜವಾಬ್ದಾರಿಯೂ ಆಗಿದೆ ಎಂದರು.
ಅಧ್ಯಕ್ಷತೆಯನ್ನು ವಹಿಸಿದ್ದ ಎಸ್‌ಡಿಎಂಸಿ ಅಧ್ಯಕ್ಷ ಅಮರೇಶ್ ಮಾತನಾಡಿ, ಶಾಲೆಯ ಶೈಕ್ಷಣಿಕ ಗುಣಮಟ್ಟ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಗ್ರಾಮಸ್ಥರ ಬೆಂಬಲ ಅತ್ಯಗತ್ಯವಾಗಿದ್ದು, ಎಲ್ಲರೂ ಕೈಜೋಡಿಸಿದರೆ ಮಾತ್ರ ಶಾಲೆಯ ಸಮಗ್ರ ಅಭಿವೃದ್ಧಿ ಸಾಧ್ಯವೆಂದು ಅಭಿಪ್ರಾಯಪಟ್ಟರು.
ನವಚೇತನ ಸಂಸ್ಥೆಯ ಮುಖ್ಯಸ್ಥ ರಾಹುಲ್ ಮಾಳಗೆ, ಗ್ರಾಮ ಪಂಚಾಯತ್ ಸದಸ್ಯ ಪ್ರದೀಪ್ ಕುಮಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮಲ್ಲಪ್ಪ, ಗಂಗಾರಾಮ್ , ನವಚೇತನ ಸಂಸ್ಥೆಯ ಅಧ್ಯಕ್ಷೆ ದೀಪಿಕಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳು ದೇಶಭಕ್ತಿ ಮತ್ತು ಸಾಮಾಜಿಕ ಜಾಗೃತಿಯ ಸಂದೇಶ ಹೊಂದಿದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿದರು. ಗ್ರಾಮಸ್ಥರು, ಪೋಷಕರು, ಶಿಕ್ಷಕರು, ಯುವಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಇದ್ದರು.