×
Ad

ಕಲಬುರಗಿ | ಸೆ.6, 7 ಹಾಗೂ ಅ.4ರಂದು ನಿಗದಿಯಾಗಿದ್ದ ಸ್ಪರ್ಧಾತ್ಮಕ ಪರೀಕ್ಷೆ ರದ್ದು

Update: 2025-09-05 22:45 IST

ಸಾಂದರ್ಭಿಕ ಚಿತ್ರ

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಸಂಖ್ಯೆ: ಪಿಎಸಿ 1 ಆರ್‌ಟಿಬಿ-4/2024 ದಿ.20-09-2024 ಮತ್ತು ತಿದ್ದುಪಡಿ ಅಧಿಸೂಚನೆ ದಿನಾಂಕ 31-12-2024ರನ್ವಯ ಹೈ.ಕ ವೃಂದದಡಿ ಅಧಿಸೂಚಿಸಲಾಗಿದ್ದ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 42 ಹುದ್ದೆಗಳು ಹಾಗೂ ಸಹಾಯಕ ಕೃಷಿ ಅಧಿಕಾರಿ 231 ಹುದ್ದೆಗಳಿಗೆ ಸೆ.6 ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸೆ.7 ಮತ್ತು ಅ.4 ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಆಯೋಗದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಿ.04-09-2025 ರಂದು ಸರ್ಕಾರದ ಹೊರಡಿಸಿರುವ ಸುತ್ತೋಲೆಯಲ್ಲಿ ದಿ.28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿ.28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ನಿಗಮ/ಮಂಡಳಿ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನು ಸಹ ರದ್ದುಗೊಳಿಸಿ, ಪರಿಶಿಷ್ಟಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸಬೇಕೆಂದು ಸೂಚಿಸಲಾಗಿರುವುದರಿಂದ ಮೇಲ್ಕಂಡ ಕೃಷಿ ಇಲಾಖೆಯಲ್ಲಿನ ಹೈ.ಕ.ವೃಂದದ ಪರೀಕ್ಷೆಗಳನ್ನು ರದ್ದುಪಡಿಸಿದೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News