ಕಲಬುರಗಿ| ಡಿಸಿಸಿ ಬ್ಯಾಂಕ್ ಅಧ್ಯಕ್ಷ, ನಿರ್ದೇಶಕರಿಗೆ ಅಭಿನಂದನಾ ಸಮಾರಂಭ
ಕಲಬುರಗಿ: ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾ ಘಟಕದ ವತಿಯಿಂದ ನೂತನವಾಗಿ ಆಯ್ಕೆಯಾದ ಕಲಬುರಗಿ - ಯಾದಗಿರಿ ಜಿಲ್ಲಾ ಸಹಕಾರಿ ಬ್ಯಾಂಕ್(ಡಿಸಿಸಿ) ಅಧ್ಯಕ್ಷರು ಹಾಗೂ ನಿರ್ದೇಶಕರಿಗೆ ಅಭಿನಂದನಾ ಸಮಾರಂಭವನ್ನು ಕೈಲಾಸ ನಗರದಲ್ಲಿ ಹಮ್ಮಿಕೊಳ್ಳಲಾಯಿತು.
ಕಲಬುರಗಿ - ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್ ನೂತನ ಅಧ್ಯಕ್ಷ ವಿಠ್ಠಲ್. ವಿ. ಯಾದವ್, ನಿರ್ದೇಶಕರಾದ ಸುರೇಶ.ಆರ್. ಸಜ್ಜನ, ಬಸವರಾಜ ಪಾಟೀಲ್ ನರಬೋಳ, ಬಸವರಾಜ ಪಾಟೀಲ್ ಚಿಂಚೋಳ್ಳಿ, ಅಶೋಕ್. ಕೆ. ಸಾವಳೇಶ್ವರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಸ್ತಾವಿಕವಾಗಿ ಮಾತನಾಡಿದ ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ರಾಜ್ಯಾಧ್ಯಕ್ಷರಾದ ಮಲ್ಲಿಕಾರ್ಜುನ ರೆಡ್ಡಿ ಅಮ್ಮಾಪುರ, ಡಿಸಿಸಿ ಬ್ಯಾಂಕಿನ ಅಧ್ಯಕ್ಷರು ಹಾಗೂ ನಿರ್ದೇಶಕರು ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿ ರೈತರಿಗೆ ಅನುಕೂಲ ಮಾಡಿಕೊಡಬೇಕೆಂದು ಹೇಳಿದರು.
ಕಲಬುರಗಿ - ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ವಿಠ್ಠಲ್. ವಿ. ಯಾದವ್ ಮಾತನಾಡಿ, ನಮ್ಮ ಅವಧಿಯಲ್ಲಿ ಉತ್ತಮವಾಗಿ ಅಭಿವೃದ್ಧಿ ಪಡಿಸುತ್ತೇವೆ. ರೈತರಿಗೆ ಸಾಲ ವಿತರಣೆ ಮಾಡುತ್ತೇವೆ ಎಂದು ಹೇಳಿದರು.
ಈ ವೇಳೆ ಕಾಂಗ್ರೆಸ್ ಮುಖಂಡರಾದ ಶರಣು ಭೂಸನೂರ, ಮಲ್ಲನಗೌಡ ಪೊಲೀಸ್ ಪಾಟೀಲ್ ಕಲ್ಲಹಂಗರಗ, ಅಖಂಡ ಕರ್ನಾಟಕ ವೀರಶೈವ ಲಿಂಗಾಯತ ಸಮಾಜದ ಜಿಲ್ಲಾಧ್ಯಕ್ಷ ಪ್ರಿನ್ಸ್ ಅನಿಲ್ ನೆನೆಗಾರ, ಮಹಿಳಾ ಘಟಕದ ಕಲ್ಬುರ್ಗಿ ಜಿಲ್ಲಾಧ್ಯಕ್ಷೆ ಭಾಗ್ಯಶ್ರೀ .ಎಮ್. ಪಾಟೀಲ್, ಸಿದ್ದಲಿಂಗರೆಡ್ಡಿ ಯಾದಗಿರಿ, ಪ್ರತೀಕ್ ಮಠಪತಿ ಉಪಸ್ಥಿತರಿದ್ದರು.