×
Ad

ಕಲಬುರಗಿ | ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ

Update: 2024-08-19 12:23 IST

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಲಬುರಗಿ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ನಗರದ ಕಾಂಗ್ರೆಸ್ ಕಚೇರಿಯಿಂದ ಪ್ರತಿಭಟನೆ ಆರಂಭಿಸಿದ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ, ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ಜಗದೇವ್ ಗುತ್ತೇದಾರ್ ಕಾಳಗಿ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಮ್ ಖಾನ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಏಜೆಂಟ್ ಆಗಿ ಕೆಲಸ ಮಾಡುತ್ತಿರುವುದಾಗಿ ಆರೋಪಿಸಿ ರಾಜ್ಯಪಾಲರ ವಿರುದ್ಧ ಘೋಷಣೆಗಳು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News