×
Ad

ಕಲಬುರಗಿ | ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸಂವಿಧಾನ ದಿನಾಚರಣೆ

Update: 2025-11-26 17:53 IST

ಕಲಬುರಗಿ :  ಶರಣಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬುಧವಾರ ರಾಷ್ಟ್ರೀಯ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಅಧ್ಯಾಪಕ ಪದ್ಮರಾಜ್ ರಾಸನಿಗೆ ಮಾತನಾಡಿ, ಭಾರತೀಯ ಸಂವಿಧಾನವನ್ನು ರಚಿಸಲು ಎರಡು ವರ್ಷ ಹನ್ನೊಂದು ತಿಂಗಳ 18 ದಿನಗಳು ಬೇಕಾಯಿತು. ನಮ್ಮ ಸಂವಿಧಾನ ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವಾಗಿದೆ ಸಂವಿಧಾನವನ್ನು ರಚಿಸುವಾಗ ಸಾಮಾನ್ಯರ ಜೀವನವನ್ನು ಸುಧಾರಣೆ ತರುವ ತತ್ವಗಳನ್ನು ಸೇರಿಸಲಾಯಿತು. ಇದಕ್ಕಾಗಿ ಯುನೈಟೆಡ್ ಸ್ಟೇಟ್ಸ್, ಐರ್ಲೆಂಡ್, ಕೆನಡಾ, ಜಪಾನ್, ಆಸ್ಟ್ರೇಲಿಯಾ ಮತ್ತು ಯುನೈಟೆಡ್ ಕಿಂಗ್‌ಡಂನಂತಹ ದೇಶಗಳ ಸಂವಿಧಾನಗಳನ್ನು ಅಧ್ಯಯನ ಮಾಡಲಾಗಿದೆ ಎಂದು ಹೇಳಿದರು.

ಸಂವಿಧಾನ ದಿನಾಚರಣೆಯು ಸಂವಿಧಾನದ ಮೌಲ್ಯಗಳ ಬಗ್ಗೆ ಅರಿವನ್ನು ಮೂಡಿಸುತ್ತದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮೌಲ್ಯಗಳ ಬಗ್ಗೆ ಜಾಗೃತಿಯನ್ನು ಮೂಡಿಸುತ್ತದೆ. ನಾಗರಿಕರಿಗೆ ಅವರ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ನೆನಪಿಸುತ್ತದೆ. ಸಂವಿಧಾನ ಕರಡು ಸಮಿತಿ ಅಧ್ಯಕ್ಷರಾಗಿದ್ದ ಡಾ.ಅಂಬೇಡ್ಕರ್ ಅವರನ್ನು ಸ್ಮರಿಸುವುದು, ಅವರಿಗೆ ಗೌರವ ಸೂಚಿಸುವುದು ಆಗಬೇಕಿದೆ ಎಂದರು.

ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಓಂ ಪ್ರಕಾಶ್, ಡಾ. ಲತಾದೇವಿ ಕರಿಕಲ್, ಡಾ.ಶ್ವೇತಾ ಉಪಸ್ಥಿತರಿದ್ದರು.  

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News