×
Ad

ಕಲಬುರಗಿ | ಎ.19 ರಂದು ಗ್ರಾಹಕರ ಕುಂದುಕೊರತೆ ಸಭೆ

Update: 2025-04-16 18:47 IST

ಕಲಬುರಗಿ : ಕಲಬುರಗಿ ಗ್ರಾಮೀಣ ವಿಭಾಗೀಯ ಕಚೇರಿ-2ರ ವ್ಯಾಪ್ತಿಯಲ್ಲಿ ಬರುವ ಜೇವರ್ಗಿ, ಯಡ್ರಾಮಿ, ಶಹಾಬಾದ್‌, ಚಿತ್ತಾಪುರ ಹಾಗೂ ಕಾಳಗಿ ಜೆಸ್ಕಾಂ ಉಪವಿಭಾಗಗಳ ಕಚೇರಿಯಲ್ಲಿ ಎ.19 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವಿದ್ಯುತ್ ಸಾಕ್ಷರತಾ ದಿನ ಹಾಗೂ ಗ್ರಾಹಕರ ಕುಂದುಕೊರತೆ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಗ್ರಾಮಗಳಲ್ಲಿನ ವಿದ್ಯುತ್‍ಗೆ ಸಂಬಂಧಿಸಿದ ಸಮಸ್ಯೆಗಳ ನಿವಾರಣೆಗಾಗಿ ಈ ಸಭೆ ಕರೆಯಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಮೇಲ್ಕಂಡ ದಿನದಂದು ಹಾಜರಾಗಿ ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ವಿಭಾಗ-2ರ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News